ಜಿಲ್ಲೆ

ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಚಾಮರಾಜನಗರ: ನಗರಸಭೆ ವ್ಯಾಪ್ತಿಯ 31 ವಾರ್ಡ್‌ಗಳನ್ನು ಬಯಲು ಶೌಚಮುಕ್ತ ವಾರ್ಡ್‌ಗಳನ್ನಾಗಿ ಘೋಷಿಸಲು ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಪ್ರತಿಕ್ರಿಯೆಗಳಿದ್ದಲ್ಲಿ ಸಲ್ಲಿಸುವಂತೆ ನಗರಸಭೆ ತಿಳಿಸಿದೆ.

ಸ್ವಚ್ಚ ಭಾರತ್ ಮಿಷನ್ ಯೋಜನೆಯ ಅಂಗವಾಗಿ ನಗರಸಭೆ ವ್ಯಾಪ್ತಿಯಲ್ಲಿ ಬಯಲು ಶೌಚಮುಕ್ತ ವಾರ್ಡ್‌ಗಳನ್ನಾಗಿ ಘೋಷಿಸಲು ಇದುವರೆವಿಗೆ 2048 ವೈಯಕ್ತಿಕ ಶೌಚಾಲಯಗಳನ್ನು ಸಾರ್ವಜನಿಕರು ನಿರ್ಮಿಸಿಕೊಂಡಿರುತ್ತಾರೆ.

ಈ ನಿಟ್ಟಿನಲ್ಲಿ ನಗರಸಭೆಯ 31 ವಾರ್ಡ್‌ಗಳನ್ನು ಬಯಲು ಶೌಚ ಮುಕ್ತ ವಾರ್ಡ್‌ಗಳೆಂದು ಘೋಷಿಸಲು ಹಾಗೂ ಇದರ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ಪ್ರತಿಕ್ರಿಯೆಗಳಿದ್ದಲ್ಲಿ ನ.20ರೊಳಗಾಗಿ ಲಿಖಿತವಾಗಿ ನಗರಸಭೆ ಕಚೇರಿಗೆ ಸಲ್ಲಿಸುವಂತೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.