ಜಿಲ್ಲೆ

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ,ಜಿಲ್ಲೆಯಲ್ಲಿ 4615 ಮತದಾರರು

ಚಿತ್ರದುರ್ಗ: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 46 15 ಮತದಾರರಿದ್ದು, ಜೂನ್ 3ರಂದು ಮತದಾನ ನಡೆಯಲಿದೆ ಆಗ್ನೇಯ ಶಿಕ್ಷಕರ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ,ಡಿಸಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಮೇ 9ರಂದು ಅಧಿಸೂಚನೆ ಪ್ರಕಟವಾಗಲಿದೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. 16 ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ. 17ರಂದು ನಾಮ ಪತ್ರಗಳ ಪರಿಶೀಲನೆ ನಡೆಯಲಿದೆ. 20ರಂದು ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿ ದೆ.
ಜೂನ್ 3ರಂದು ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ಜರುಗಲಿದೆ. ಜೂನ್ 6ರಂದು ಮತ ಎಣಿಕೆ ನಡೆಯಲಿದ್ದು,ಜೂನ್ 12 ರಂದು ಚುನಾವಣೆ ಪ್ರಕ್ರಿಯಗಳು ಪೂರ್ಣಗೊಳ್ಳಲಿವೆ. ಮೇ 2ರಿಂದಲೇ ಮಾದರಿ ಸಂಹಿತೆ ಜಾರಿಯಾಗಿದೆ.
4615 ಶಿಕ್ಷಕ ಮತದಾರರು
ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಅಂತಿಮ ಮತದಾರರ ಪಟ್ಟಿಯನ್ನು 2023 ಡಿಸೆ ಸೆಂಬರ್ 30ರಂದು ಪ್ರಕಟಿಸಲಾಗಿದೆ. ಈ ಪಟ್ಟಿಯಂತೆ ಜಿಲ್ಲೆಯಲ್ಲಿ 3238 ಪುರುಷ,1377 ಮಹಿಳೆಯರು ಸೇರಿ 4615 ಶಿಕ್ಷಕ ಮತದಾರ ರು ಇದ್ದಾರೆ.
ಇದರ ಅನ್ವಯ ಮೊಳಕಾಲ್ಮೂರು ತಾಲೂಕಿನಲ್ಲಿ 210 ಪುರುಷ,43 ಮಹಿಳೆಯರು ಸೇರಿ 253 ಶಿಕ್ಷಕ ಮತದಾರರು ಇದ್ದಾರೆ. ಇದೇ ಕ್ರ ಮದಲ್ಲಿ ಚಳ್ಳಕರೆ-683-220-903.ಚಿತ್ರದುರ್ಗ-929-590-1519. ಹಿರಿಯೂರು-571-251-822,ಹೊಸದುರ್ಗ-499-166-665 ಹಾಗೂ ಹೊಳಲ್ಕೆರೆ ತಾಲೂಕಿನಲ್ಲಿ 346 ಪುರುಷ,107 ಮಹಿಳೆಯರು ಸೇರಿ 453 ಮತದಾರರು ಇದ್ದಾರೆ.
ಮತಪಟ್ಟಿಗೆ ಸೇರ್ಪಡೆ ಮೇ 6 ಕೊನೇ ದಿನ
ಮತಪಟ್ಟಿ ಸೇರ್ಪಡೆಗೆ ಅರ್ಜಿ ಸಲ್ಲಿಸಲು ಮೇ 6 ಅಂತಿಮ ದಿನವಾಗಿದೆ. ಅರ್ಹ ಮತದಾರರು ಅರ್ಜಿ ಸಲ್ಲಿಸಬಹುದು. ಕಳೆದ ಜನ ವರಿಯಿಂದ ಈವರೆಗೆ ಸ್ವೀಕೃತವಾಗಿರುವ ಅರ್ಜಿಗಳು ಹಾಗೂ ಮೇ 6 ಸಂಜೆ 5.30ವರೆಗೆ ಸ್ವೀಕರಿಸುವಅರ್ಜಿಗಳನ್ನು ನಿಯಮಾನು ಸಾರ ಮತಪಟ್ಟಿಗೆ ಸೇರಿಸಲು ಕ್ರಮಕೈಗೊಳ್ಳಲಾಗುವುದೆಂದು ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.