ಜಿಲ್ಲೆ

ಆಟಿ ಸಂಭ್ರಮೋತ್ಸವ, ಪ್ರೋತ್ಸಾಹ ಧನ ವಿತರಣೆ ಇಂದು

ಸೋಮವಾರಪೇಟೆ: ನಾರಾಯಣಗುರು ಸೇವಾ ಸಮಿತಿ ಮತ್ತು ತುಳುನಾಡು ಬಿಲ್ಲವ ಮಹಿಳಾ ಸಂಘದ ಆಶ್ರಯದಲ್ಲಿ 10ನೇ ವರ್ಷದ ಆಟಿ ಸಂಭ್ರಮೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಕಾರ್ಯಕ್ರಮ ಸೆ.14ರಂದು ಮಧ್ಯಾಹ್ನ 2 ಗಂಟೆಗೆ ಮಾನಸ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ನಾರಾಯಣಗುರು ಸೇವಾ ಸಮಿತಿ ಅಧ್ಯಕ್ಷ ಬಿ.ಆರ್. ಚಂದ್ರಹಾಸ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಡಾ.ಮಂತರ್‌ಗೌಡ, ಕುದ್ರೋಳಿ ಗೋಕರ್ತಾತೇಶ್ವರ ದೇವಾಲಯದ ಕೋಶಾಧಿಕಾರಿ ಪದ್ಮರಾಜ್ ಪೂಜಾರಿ, ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್, ಕೊಡಗು ಬಿಲ್ಲವ ಸಂಘದ ಅಧ್ಯಕ್ಷ ಲಿಂಗಪ್ಪ ಪೂಜಾರಿ, ಕಿರಗಂದೂರಿನ ಸಾಮಾಜಿಕ ಕಾರ್ಯಕರ್ತ ಎ.ಎನ್.ಪದ್ಮನಾಭ, ವಿರಾಜಪೇಟೆ ಡಿವೈಎಸ್‌ಪಿ ಮಹೇಶ್‌ಕುಮಾರ್ ಭಾಗವಹಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ರಾಜ್ಯ ನಾರಾಯಣಗುರು ವಿಚಾರವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮದ ಪ್ರಯುಕ್ತ ಅಂದು ಬೆಳಗ್ಗೆ ಮಕ್ಕಳು ಸೇರಿದಂತೆ ಹಿರಿಯ ನಾಗರಿಕರಿಗೆ ಸಾಂಸ್ಕೃತಿಕ ಸ್ಪರ್ಧೆಗಳು, ಮಹಿಳೆಯರು ಮತ್ತು ಪುರುಷರಿಗೆ ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಲಿದೆ. 2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಧನ ವಿತರಿಸಲಾಗುವುದು. ಸೆ.12ರ ಒಳಗೆ ವಿದ್ಯಾರ್ಥಿಗಳ ಅಂಕಪಟ್ಟಿಯನ್ನು ತಲುಪಿಸುವಂತೆ ಕಾರ್ಯದರ್ಶಿ ಇಂದಿರಾ ಮೊಣ್ಣಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.