ಜಿಲ್ಲೆ

ಆತ್ಮರಕ್ಷಣಾ ಕಲೆ ಅನುಷ್ಠಾನಕ್ಕಾಗಿ 18 ಕೋಟಿ

ಯಾದಗಿರಿ: ರಾಜ್ಯ ವಸತಿ ಶಾಲೆಗಳ ಹೆಣ್ಣುಮಕ್ಕಳ ಆತ್ಮರಕ್ಷಣೆಗಾಗಿ ರೂಪಿಸಿರುವ ಓಬವ್ವ ಆತ್ಮರಕ್ಷಣಾ ಕಲೆ ಯೋಜನೆಯಡಿ ಕರಾಟೆ ಕಲಿಕೆ ಅನುಷ್ಠಾನಕ್ಕಾಗಿ 18 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ವಡಗೇರಾ ತಾಲೂಕಿನ ಬೆಂಡೆಬೆಂಬಳಿ ಮೊರಾಜರ್ಿ ದೇಸಾಯಿ ವಸತಿ ಶಾಲೆಯಲ್ಲಿ ಮಂಗಳವಾರ ವಿದ್ಯಾಥರ್ಿಗಳಿಂದ ಸ್ವಯಂ ರಕ್ಷಣಾ ಕೌಶಲ್ಯ ( ಕರಾಟೆ) ಪ್ರದರ್ಶನವನ್ನು ವೀಕ್ಷಿಸಿ ಮಾತನಾಡಿ, ಹೆಣ್ಣು ಮಕ್ಕಳ ಆತ್ಮರಕ್ಷಣೆ ಕಲೆ ಅಗತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸಕರ್ಾರ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಯೋಜನೆಯನ್ನು ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿ ಆರಂಭಿಸಿದ್ದು, ಸುಮಾರು ಒಂದು ಸಾವಿರ ಕರಾಟೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮಕ್ಕಳ ಕರಾಟೆ ಕಲೆ ಹಾಗೂ ಸಮವಸ್ತ್ರಕ್ಕಾಗಿ 18 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ ಎಂದರು.

ಬಡವರು ಹಿಂದುಳಿದವರು, ಅಲೆಮಾರಿಗಳ ಮಕ್ಕಳೇ ವಿಶೇಷವಾಗಿ ಈ ವಸತಿ ಶಾಲೆಗಳಿಗೆ ದಾಖಲಾಗುತ್ತಿದ್ದು ಈ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಕರ್ಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ವಸತಿಶಾಲೆಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ವಹಿಸಲಾಗುವುದು. ಯಾದಗಿರಿ ಶೈಕ್ಷಣಿಕವಾಗಿ ಅಭಿವೃದ್ಧಿಯಾಗುತ್ತಿರುವುದು ಖುಷಿ ತಂದಿದೆ ಎಂದು ಹೇಳಿದರು.
ಶಾಸಕ ವೆಂಕಟರಡ್ಡಿ ಮುದ್ನಾಳ್ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ಮಕ್ಕಳಿಗೆ ಉನ್ನತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸಕರ್ಾರ ವಸತಿ ಶಾಲೆಗಳನ್ನು ಆರಂಭಿಸಿದೆ. ನನ್ನ ಕ್ಷೇತ್ರದಲ್ಲಿ ಈ ವರ್ಷ 7 ಪ್ರೌಢಶಾಲೆಗಳನ್ನು ಸಕರ್ಾರ ಮಂಜೂರು ಮಾಡಿದೆ. ಪಾಲಕರು ವಿಶೇಷವಾಗಿ ತಮ್ಮ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದೆ ಬರಬೇಕು ಎಂದು ಸಲಹೆ ನೀಡಿದರು.