ಜಿಲ್ಲೆ

ಆರಗ ಜ್ಞಾನೇಂದ್ರ ಕ್ಷಮೆಯಾಚನೆಗೆ ಆಗ್ರಹ

ಬೀದರ್: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಕುರಿತು ಹಗುರವಾಗಿ ಮಾತನಾಡಿರುವ ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರು ಕೂಡಲೇ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಸಂಜುಕುಮಾರ ಡಿ.ಕೆ. ಆಗ್ರಹಿಸಿದ್ದಾರೆ.
ಆರಗ ಜ್ಞಾನೇಂದ್ರ ಅವರು ಮೈಬಣ್ಣ ಪ್ರಸ್ತಾಪಿಸಿ ಖರ್ಗೆ ಹಾಗೂ ಖಂಡ್ರೆ ಅವರ ಅವಹೇಳನ ಮಾಡಿರುವುದು ತೀವ್ರ ಖಂಡನೀಯ ಎಂದು ಹೇಳಿದ್ದಾರೆ.
ಆರಗ ಜ್ಞಾನೇಂದ್ರ ಹೇಳಿಕೆಯು ಬಿಜೆಪಿ ವರ್ಣ ಭೇದ ನೀತಿಯನ್ನು ಪೋಷಿಸುತ್ತಿದೆ ಎನ್ನುವುದನ್ನು ತೋರಿಸುತ್ತದೆ. ಇದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ ಎಂದು ತಿಳಿಸಿದ್ದಾರೆ.
ಅವಹೇಳನಕಾರಿ ಹೇಳಿಕೆಗಾಗಿ ಆರಗ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.