filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.5495241, 0.4078927);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39; 
ಜಿಲ್ಲೆ

ಆರೂ ಸ್ಥಾನ ಕೈ ಗೆಲ್ಲುವ ವಿಶ್ವಾಸ

ಚಿತ್ರದುರ್ಗ: ಪದವೀಧರ ಹಾಗೂ ಶಿಕ್ಷಕರ ತಲಾ 3 ಕ್ಷೇತ್ರಗಳಿಗೆ ನಡೆಯುತ್ತಿರುವ ಎಂಎಲ್ಸಿ ಚುನಾವಣೆಯಲ್ಲಿ ಕಾಂಗ್ರೆಸ್ ಆರೂ ಸ್ಥಾನ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಶಿಕ್ಷಕರ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ ವಿಶ್ವಾಸ ವ್ಯಕ್ತಪಡಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 11,494 ಶಿಕ್ಷಕರು ಹಾಗೂ 35 ಸಾವಿರ ಅತಿಥಿ ಶಿಕ್ಷಕರ ನೇಮಕ, 2,162 ಸರ್ಕಾರಿ ಶಾಲೆಗಳ 7,342 ಕೊಠಡಿಗಳ ದುರಸ್ತಿಗೆ 70 ಕೋಟಿ ರೂ. ಅನುದಾನ ಬಿಡುಗಡೆ, 58 ಲಕ್ಷ ವಿದ್ಯಾರ್ಥಿಗಳಿಗೆ 280 ಕೋಟಿ ರೂ. ವೆಚ್ಚದಲ್ಲಿ ಪೌಷ್ಟಿಕ ಆಹಾರ ವಿತರಣೆ, 45 ಲಕ್ಷ ಮಕ್ಕಳಿಗೆ 143 ಕೋಟಿ ರೂ. ವೆಚ್ಚದಲ್ಲಿ ಎರಡು ಜೊತೆ ಸಮವಸ್ತ್ರವನ್ನು ಕಾಂಗ್ರೆಸ್ ಸರ್ಕಾರ ವಿತರಿಸಿದೆ ಎಂದರು.

ಅತ್ಯುತ್ತಮ ಸಾಧನೆಗೈದ ವಿಶ್ವವಿದ್ಯಾಲಯಗಳಿಗೆ ತಲಾ 50 ಲಕ್ಷದಂತೆ ಒಟ್ಟು 350 ಕೋಟಿ ರೂ. ಅನುದಾನ ನೀಡಲಾಗಿದೆ. ಅತಿಥಿ ಉಪನ್ಯಾಸಕರಿಗೆ ಕನಿಷ್ಠ 5 ಸಾವಿರ ರೂ.ನಿಂದ ಗರಿಷ್ಠ 8 ಸಾವಿರ ರೂ. ವೇತನ ಹೆಚ್ಚಳ, 5 ಲಕ್ಷ ರೂ.ವರೆಗೂ ವೈದ್ಯಕೀಯ ಸೌಲಭ್ಯ, ನಿವೃತ್ತಿ ಬಳಿಕ 5 ಲಕ್ಷ ರೂ. ಇಡಿಗಂಟು ವಿತರಣೆ, ಎನ್‌ಪಿಎಸ್ ಯೋಜನೆಯಲ್ಲಿದ್ದ 19 ಸಾವಿರ ನೌಕರರನ್ನು ಒಪಿಎಸ್‌ಗೆ ಒಳಪಡಿಸಲಾಗಿದೆ. ಇವೆಲ್ಲ ಸಾಧನೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ವರದಾನವಾಗಲಿದೆ ಎಂದು ತಿಳಿಸಿದರು.

ಸಮಿತಿ ಸಂಚಾಲಕ ತಿಮ್ಮಯ್ಯ ಪುರ್ಲೆ, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ರೇವಣಸಿದ್ದಪ್ಪ ಇದ್ದರು.