ಜಿಲ್ಲೆ

ಆರೋಗ್ಯ ಕಾಪಾಡಲು ಸರ್ಕಾರ ಬದ್ಧ

ಬೈಲಹೊಂಗಲ: ಜನರ ಕಲ್ಯಾಣಕ್ಕಾಗಿ ಆರೋಗ್ಯ ಸೇವೆಯನ್ನು ಇನ್ನಷ್ಟು ಬಲಿಷ್ಠಗೊಳಿಸುವ ಗುರಿ ಸರ್ಕಾರ ಹೊಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ ಹೇಳಿದರು.

ಪಟ್ಟಣದ ದೇವಲಾಪುರ ರಸ್ತೆಯಲ್ಲಿರುವ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಶನಿವಾರ 21 ಕೋಟಿ ರೂ. ವೆಚ್ಚದ ರಾಷ್ಟ್ರೀಯ ಆರೋಗ್ಯ ಅಭಿಯಾನ (ಎನ್​ಎಚ್​ಎಂ) ಅಡಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಲೋಕಾರ್ಪಣೆ, ದೊಡವಾಡ ಗ್ರಾಮದ 4.5 ಕೋಟಿ ರೂ. ವೆಚ್ಚದ ಆರೋಗ್ಯ ಕೇಂದ್ರ ಉದ್ಘಾಟಿಸಿ ಮಾತನಾಡಿದರು. ಕೇಂದ್ರ, ರಾಜ್ಯ ಸರ್ಕಾರದ ಸಹಯೋಗದಲ್ಲಿ ಆಸ್ಪತ್ರೆ ನಿರ್ಮಿಸಲಾಗಿದ್ದು, ಅಗತ್ಯ ಸಿಬ್ಬಂದಿ, ಸಾಮಗ್ರಿ ಸೇರಿ ಎಲ್ಲ ಮೂಲಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಸಾರ್ವಜನಿಕ ಆಸ್ಪತ್ರೆ ಹಳೆಯ ಕಟ್ಟಡ ದುರಸ್ತಿಗಾಗಿ 4.50 ಕೋಟಿ ರೂ. ಅನುದಾನ ನೀಡಲಾಗುವುದು ಎಂದರು.
ತಾಯಿ ಆರೋಗ್ಯವಾಗಿದ್ದರೆ ಮಾತ್ರ ಮಗುವಿನ ಆರೋಗ್ಯ ಸುಸ್ಥಿತಿಯಲ್ಲಿರುತ್ತದೆ. ವೆದ್ಯರು ಮತ್ತು ಸಿಬ್ಬಂದಿ ನೇಮಕ ಮಾಡಲು ಕ್ರಮ ಕೆಗೊಳ್ಳಲಾಗವುದು. ಶಾಸಕ ಮಹಾಂತೇಶ ಕೌಜಲಗಿ ಸದಾ ಒತ್ತಡ ಹಾಕಿ ಅನುದಾನ ಬಿಡುಗಡೆ ಮಾಡಿಸಿ ಇಂದು ಆಸ್ಪತ್ರೆ ಉದ್ಘಾಟಿಸುವಂತೆ ಮಾಡಿದ್ದಾರೆ ಎಂದರು.

ಚನ್ನಮ್ಮನ ಕಿತ್ತೂರು ತಾಲೂಕಿನಲ್ಲಿ ನೂತನ ಆಸ್ಪತ್ರೆ ಕಟ್ಟಡ, ಸವದತ್ತಿಗೆ 4.5 ಕೋಟಿ ರೂ. ವೆಚ್ಚದ ಪಿಎಚ್​ಸಿ ನಿರ್ಮಿಸಲು ಶ್ರೀದಲ್ಲಿ ಭೂಮಿಪೂಜೆ ನೆರವೇರಿಸಲಾಗುವುದು. ಬೆಳಗಾವಿ ದೊಡ್ಡ ಜಿಲ್ಲೆಯಾಗಿದ್ದು, ಆದ್ಯತೆ ಮೇರೆಗೆ ಆಸ್ಪತ್ರೆಗಳಿಗೆ ಮೂಲಸೌಕರ್ಯ ಒದಗಿಸಲಾಗುವುದು ಎಂದರು.

ಶಾಸಕ ಮಹಾಂತೇಶ ಕೌಜಲಗಿ ಅಧ್ಯತೆ ವಹಿಸಿ ಮಾತನಾಡಿ, ಈ ಭಾಗದಲ್ಲಿ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆಗಬೇಕನ್ನುವ ಬಹುದಿನಗಳ ಜನರ ಬೇಡಿಕೆ ಇಂದು ಈಡೇರಿದೆ. ಹಿಂದಿನ ಬಿಜೆಪಿ ಸರ್ಕಾರ ಕಾಂಗ್ರೆಸ್​ ಶಾಸಕನೆನ್ನುವ ಕಾರಣಕ್ಕೆ ಮಂಜೂರಾದ ತಾಯಿ, ಮಗು ಆರೆಕೆ ಕೇಂದ್ರದ ಅನುದಾನ ತಡೆ ಹಿಡಿದಿತ್ತು. ನಮ್ಮ ಸರ್ಕಾರದ ಸಹಯೋಗದಲ್ಲಿ ಆಸ್ಪತ್ರೆ ಲೋಕಾರ್ಪಣೆಗೊಂಡಿರುವುದು ಸಂತಸ ತಂದಿದೆ ಎಂದರು. ತಾಲೂಕಿನ ಸಾರ್ವಜನಿಕ ಆಸ್ಪತ್ರೆಯು ಖಾತ್ರಿ ಗುಣಮಟ್ಟದ ಅಡಿಯಲ್ಲಿ ಕಾಯಕಲ್ಪ ಪ್ರಶಸ್ತಿ, ಲಕ್ಷ$್ಯ ಪ್ರಶಸ್ತಿ ಮತ್ತು ಎನ್​ಕ್ಯೂಯುಎಸ್​ ಸರ್ವೇಯಲ್ಲಿ ರಾಜ್ಯಕ್ಕೆ 3ನೇ ಸ್ಥಾನ, ಜಿಲ್ಲೆಗೆ ಮೊದಲ ಸ್ಥಾನ ಪಡೆದಿದೆ ಎಂದರು.

ಶಾಸಕರಾದ ಬಾಬಾಸಾಹೇಬ ಪಾಟೀಲ, ವಿಶ್ವಾಸ ವೆದ್ಯ, ಮುಖಂಡ ಮಣಾಲ ಹೆಬ್ಬಾಳ್ಕರ್​, ಆರೋಗ್ಯ ಇಲಾಖೆ ಆಯುಕ್ತ ಡಿ.ರಣದೀಪ, ನಿರ್ದೇಶಕ ಡಾ.ಜಿ.ಎನ್​. ಶ್ರೀನಿವಾಸ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹೇಶ ಕೋಣಿ, ಡಾ.ಎಸ್​.ವಿ. ಮುನ್ಯಾಳ, ಉಪವಿಭಾಗಾಧಿಕಾರಿ ಪ್ರಭಾವತಿ ಕೀರಪುರ, ವಿನಯ ನಾವಲಗಟ್ಟಿ, ಎಂ.ಜಿ.ಮುರಗೋಡ, ಬಸವರಾಜ ಜನ್ಮಟ್ಟಿ, ಶಂಕರಗೌಡ ಪಾಟೀಲ, ಶಿವರುದ್ರಪ್ಪ ಹಟ್ಟಿಹೊಳಿ, ತಾಪಂ ಇಒ ಸುಭಾಸ ಸಂಪಗಾಂವಿ, ಟಿಎಚ್​ಒ ಡಾ.ಸಂಜಯ ಸಿದ್ದನ್ನವರ, ಡಾ.ನಿರ್ಮಲಾ ಮಹಾಂತಶೆಟ್ಟಿ, ಡಾ.ರವಿ ಜ