ಬಾಗಲಕೋಟೆ: ನವನಗರದ ಜಿಲ್ಲಾಸ್ಪತ್ರೆಯ ಆವರಣದ ಜಿಲ್ಲಾ ಸಮೀಕ್ಷಾ ಘಟಕದ ಮುಂಭಾಗದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಯುಷ್ಮಾನ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ದೊರೆಯುವ ಸೌಲಭ್ಯಗಳನ್ನು ಪ್ರಚಾರ ಮಾಡುವ ವಾಹನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ ಮತ್ತು ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ ಮಾತನಾಡಿ, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಗರ್ಭಿಣಿ ಮತ್ತು ಮಗುವಿನ ಜನನ ಸಮಯದ ಸೇವೆಗಳು, ನವಜಾತ ಮತ್ತು ಶಿಶುವಿನ ಸಮಗ್ರ ಆರೋಗ್ಯ ಸೇವೆಗಳು ಬಾಲ್ಯ ಮತ್ತು ಹದಿಹರೆಯದವರ ಸಮಗ್ರ ಆರೋಗ್ಯ ಸೇವೆಗಳು ಕುಟುಂಬ ಕಲ್ಯಾಣ, ಗರ್ಭನಿರೋಧಕ ಸೇವೆಗಳು ಮತ್ತು ಇತರ ಸಂತಾನೋತ್ಪತ್ತಿ ಆರೋಗ್ಯ ಸೇವೆಗಳು ರಾಷ್ಟ್ರೀಯ ಆರೋಗ್ಯ ಯೋಜನೆಗಳು ಹಾಗೂ ಸಾಂಕ್ರಾಮಿಕ ರೋಗಗಳ ನಿರ್ವಹಣೆ ಸೇವೆಗಳು ಪಡೆಯಬಹುದಾಗಿದೆ ಎಂದರು.
ಅಲ್ಲದೆ ಅಸಾಂಕ್ರಾಮಿಕ ರೋಗಗಳು (ಮಧುಮೇಹ ಹೆಚ್ಚು ರಕ್ತದೊತ್ತಡ, ದೀರ್ಘಾವಧಿ ಶ್ವಾಸಕೋಶ ಕಾಯಿಲೆ ಕೀಲು ನೋವು ಮತ್ತು ಸಂಧಿವಾತ, ಕ್ಯಾನ್ಸರ್-ಬಾಯಿ ಸ್ತನ ಮತ್ತು ಗರ್ಭಕಂಠ ಕ್ಯಾನ್ಸರ್ ಗಳ ಸ್ಟ್ರೀಮಿಂಗ್ ಸೇವೆಗಳು), ಮೂಲಭೂತ ನೇತ್ರ ಸೇವೆಗಳು, ಮೂಲಭೂತ ಕಿವಿ, ಮೂಗು, ಗಂಟಲು ಸೇವೆಗಳು, ಮೂಲಭೂತ ವೃದ್ಧಾಪ್ಯ, ಮಾನಸಿಕ ಆರೋಗ್ಯದ ಮೂಲಭೂತ ಸ್ವೀನಿಂಗ್ ಸೇವೆಗಳು, ಮೂಲಭೂತ ದಂತ ಆರೋಗ್ಯ ಸೇವೆಗಳು ಅಪಘಾತಗಳು ಹಾಗೂ ಗಾಯಾಳುಗಳಿಗೆ ಮೂಲಭೂತ ಮತ್ತು ಪ್ರಥಮ ಚಿಕಿತ್ಸೆ ಹಾವು, ನಾಯಿ ಕಚ್ಚುವುದು, ಕತ್ತರಿಸಿದ, ಮತ್ತಿತರ ಗಾಯಗಳಿಗೆ ಪ್ರಥಮ ಚಿಕಿತ್ಸೆ ಸೇವೆಗಳು ದೊರೆಯಲಿದ್ದು, ಸಾರ್ವಜನಿಕರು ಸೇವೆಗಳ ಸೌಲಭ್ಯ ಪಡೆಯಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರ್ ಸಿ ಎಚ್ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಡಾ.ಶಿವನಗೌಡ ಪಾಟೀಲ, ಜಿಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಸೇರಿದಂತೆ ಆರೋಗ್ಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.