ಚಿತ್ರದುರ್ಗ: ನೈರ್ಮಲ್ಯಕ್ಕೆ ಒತ್ತು ನೀಡುವ ಮೂಲಕ ಆರೋಗ್ಯಪೂರ್ಣ ಸಮಾಜದ ನಿರ್ಮಾಣಕ್ಕೆ ಎಲ್ಲರ ಸಹಕಾರದ ಅಗತ್ಯವಿದೆ ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ಎನ್.ಸುಹಾಸ್ ಹೇಳಿದರು. ನೆಹರು ಯುವ ಕೇಂದ್ರ,ನಗರಸಭೆ,ರಂಗ ಭಂಡಾರ ಕಲಾ ಸಂ ಘ,ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಶಾಖೆ,ಆರೋಗ್ಯವೇ ಭಾಗ್ಯ ಯುವಕರ ಸಂಘ, ಡಾನ್‌ಬೊಸ್ಕೊ ಪದವಿ ಕಾಲೇಜು ಎನ್‌ಎಸ್‌ಎಸ್ ವಿದ್ಯಾರ್ಥಿ ಗಳು ಹಾಗೂ ಗಾನಯೋಗಿ ಸಂಗೀತ ಬಳಗದ ಸಹಯೋಗದಲ್ಲಿ ಗುರುವಾರ ಸ್ವಚ್ಛತಾ ಹೀ ಸೇವಾ ಪಾಕ್ಷಿಕದ ಅಂಗವಾಗಿ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಸ್ವಚ್ಛತಾ ಕಾರ‌್ಯಕ್ರಮದಲ್ಲಿ ಅವರು ಮಾತನಾಡಿದರು.
ಜನರಲ್ಲಿ ಸ್ವಚ್ಛತೆಯೆಡೆ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಅಕ್ಟೋಬರ್ 2ರವರೆಗೆ ನಾನಾ ಶಾಲಾ, ಕಾಲೇಜುಗಳ ಆವರಣ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸ್ವಚ್ಛತಾತಾ ಆಂದೋಲನ ನಡೆಸಲಾಗುತ್ತಿದೆ ಎಂದರು.
ಪ್ರತಿಜ್ಞಾವಿಧಿ ಬೋಧಿಸಿದ ನಗರಸಭೆ ಪೌರಾಯುಕ್ತೆ ಎಂ.ರೇಣುಕಾ ಅವರು ಮಾತನಾಡಿ,ನಗರದ ಸ್ವಚ್ಛತೆಗೆ ಪ್ರತಿಯೊಬ್ಬ ನಾಗರಿಕರು ಕೈ ಜೋಡಿಸ ಬೇಕೆಂದರು. ಭರಮಸಾಗರ ಪ್ರಥಮ ದರ್ಜೆ ಕಾಲೇಜು ಎನ್‌ಎಸ್‌ಎಸ್ ಅಧಿಕಾರಿ ಲೋಕೇಶ್‌ನಾಯ್ಕ, ಸಂಘದ ಅಧ್ಯಕ್ಷ ಎಲ್.ಪರಶುರಾಮ್,ಕಾರ‌್ಯದರ್ಶಿ ಶ್ರೀನಿವಾಸ್,ಎ.ಜಿ.ಸುರೇಂದ್ರಬಾಬು,ರೆಡ್ ಕ್ರಾಸ್ ಸಂಸ್ಥೆ ಜಿಲ್ಲಾ ಕಾರ‌್ಯದರ್ಶಿ ಎನ್.ಮಜಹರ್‌ಉಲ್ಲಾ,ನಗರಸಭೆ ಆರೋಗ್ಯ ನಿರೀಕ್ಷಕಿ ಭಾರತಿ ಮತ್ತಿತರರು ಇದ್ದರು.