ಜಿಲ್ಲೆ

ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮುಂದಾಗಿ

ಚಿತ್ರದುರ್ಗ:ಪ್ರತಿಯೊಬ್ಬರು ಶುದ್ಧ ಕುಡಿಯುವ ನೀರು ಸೇವಿಸಬೇಕು. ತಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಆ ರೋಗ್ಯಕರ ಸಮಾಜ ನಿರ್ಮಾಣಕ್ಕೆ ಸಹಕರಿಸುವಂತೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ನಾಗರಿಕರಿಗೆ ಮನವಿ ಮಾಡಿದರು.
ಜಿಲ್ಲಾಡಳಿತ,ಜಿಪಂ,ಆರೋಗ್ಯಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪರಿಸರ ನೈರ್ಮಲ್ಯ,ಶುದ್ಧ ಕು ಡಿಯುವ ನೀರು ಹಾಗೂ ಸ್ವಚ್ಛತೆ ಕುರಿತಂತೆ ಜನಜಾಗೃತಿ ಸಪ್ತಾಹ ಅಂಗವಾಗಿ ನಗರದಲ್ಲಿ ಬುಧವಾರ ಸಂಜೆ ಏರ್ಪಡಿಸಿದ್ದ ಪಂಜಿನ ಮೆ ರಣಿಗೆಗೆ ಚಾಲನೆ ನೀಡಿ ಮಾತನಾಡಿದ ಅವರು,ನೈರ್ಮಲ್ಯ ಮತ್ತು ಶುದ್ಧ ಕುಡಿಯುವ ನೀರು ಸೇವನೆ ಕುರಿತಂತೆ ಜನರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕಿದೆ ಎಂದರು.
ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಮಾತನಾಡಿ,ಸಪ್ತಾಹದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ನೀರು ಕಲುಷಿತವಾ ದರೆ ಹಲವು ರೋಗ-ರುಜಿನಗಳಿಗೆ ತುತ್ತಾಗುವ ಸಾಧ್ಯತೆಗಳಿರುತ್ತವೆ. ಹಾಗಾಗಿ ಜನರು ಕುದಿಸಿ,ಆರಿಸಿದ ನೀರನ್ನು ಕುಡಿಯುವ ಅಭ್ಯಾಸ ರೂಢಿಸಿಕೊಳ್ಳಬೇಕು. ಸುತ್ತಲಿನ ಪರಿಸರವನ್ನೂ ಸ್ವಚ್ಛವಾಗಿ ಇಟ್ಟುಕೊಳ್ಳುವ ಕಡೆ ಹೆಚ್ಚಿನ ಗಮನಹರಿಸಬೇಕಿದೆ ಎಂದರು.
ಓಬವ್ವ ವೃತ್ತದಿಂದ ಆರಂಭವಾದ ಮೆರವಣಿಗೆ ಮದಕರಿನಾಯಕರ ವೃತ್ತ,ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ ಮೂಲಕ ಹಾದು ಎಸ್ ಬಿಎಂ ಸರ್ಕಲ್‌ನಿಂದ ಮರಳಿ ಓಬವ್ವ ವೃತ್ತದಲ್ಲಿ ಮುಕ್ತಾಯಗೊಂಡಿತು.
ಜಿಪಂ ಸಿಇಒ ಸೋಮಶೇಖರ್,ಎಡಿಸಿ ಬಿ.ಟಿ.ಕುಮಾರಸ್ವಾಮಿ,ಎಸಿ ಎಂ.ಕಾರ್ತೀಕ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉ ಪ ನಿರ್ದೇಶಕಿ ಭಾರತಿ ಆರ್.ಬಣಕಾರ್,ತಾಪಂ ಇಒ ಎಚ್.ಹನುಮಂತಪ್ಪ,ಶಿಶುಅಭಿವೃದ್ಧಿ ಯೋಜನಾಧಿಕಾರಿ ಲೋಕೇಶ್ವರಪ್ಪ,ವಾರ್ತಾ ಧಿಕಾರಿ ತುಕರಾಂ,ಚಿತ್ರದುರ್ಗ ತಾಲೂಕು ವ್ಯಾಪ್ತಿ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು,ಕಾರ‌್ಯದರ್ಶಿಗಳು,ದ್ವಿತೀಯ ದರ್ಜೆ ಸಹಾಯಕರು, ಆಶಾ,ಅಂಗನವಾಡಿ ಕಾರ‌್ಯಕರ್ತೆಯರು ಇದ್ದರು.
(ಸಿಟಿಡಿ 16 ಡಿಸಿ)
ಜನಜಾಗೃತಿ ಸಪ್ತಾಹದ ಅಂಗವಾಗಿ ಚಿತ್ರದುರ್ಗದಲ್ಲಿ ಬುಧವಾರ ಏರ್ಪಡಿಸಿದ್ದ ಪಂಜಿನ ಮೆರವಣಿಗೆಯಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ,ಡಿಸಿ ಜಿಆರ್‌ಜೆ ದಿವ್ಯಾಪ್ರಭು,ಜಿಪಂ ಸಿಇಒ ಸೋಮಶೇಖರ್,ಎಡಿಸಿ ಬಿ.ಟಿ.ಕುಮಾರಸ್ವಾಮಿ,ಎಸಿ ಎಂ.ಕಾರ್ತಿಕ್,ವಾರ್ತಾಧಿಕಾರಿ ತು ಕರಾಂ ಮತ್ತಿತರರು ಇದ್ದರು.