ಶಹಾಪುರ: ಆರೋಗ್ಯಕರ ಜೀವನಕ್ಕೆ ಪೌಷ್ಟಿಕ ಆಹಾರ ಮತ್ತು ಸ್ವಚ್ಛತೆ ಬಹಳ ಅಗತ್ಯ ಎಂದು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಬಿ.ಕೆ.ಬಿರಾದಾರ ಹೇಳಿದರು.
ಕೇಂದ್ರ ಸಂವಹನ ಇಲಾಖೆ, ತಾಲೂಕು ಪಂಚಾಯಿತಿ, ಶಿಶು ಅಭಿವೃದ್ಧಿ ಯೋಜನೆ ಹಾಗೂ ವಿವಿಧ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡ ಪೌಷ್ಟಿಕ ಆಹಾರ ಮಾಸಾಚರಣೆ, ಸ್ವಚ್ಛತಾ ಅಭಿಯಾನ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ವಿವಿಧ ಯೋಜನೆಗಳ ಛಾಯಾಚಿತ್ರ ಪ್ರದರ್ಶನ ಮತ್ತು ಜಾಗೃತಿ ಕರ‍್ಯಕ್ರಮ ಉದ್ಘಾಟಿಸಿದ ನಗರಸಭೆ ಅಧ್ಯಕ್ಷೆ ಮೆಹರೂನ್ ಬೇಗಂ ಲಿಯಾಕತ್ ಪಾಷಾ, ಇಂದಿನ ಮಕ್ಕಳು ರಾಸಾಯನಿಕ ಭರಿತ ಆಹಾರಗಳನ್ನೇ ಹೆಚ್ಚಾಗಿ ಬಳಸುತ್ತಿದ್ದಾರೆ. ಇದರಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹೀಗಾಗಿ ದೇಸಿ ದವಸ ಧಾನ್ಯಗಳನ್ನೇ ಬಳಕೆ ಮಾಡಬೇಕು ಎಂದು ಸಲಹೆ ನೀಡಿದರು.
ನಗರಸಭೆ ಪರಿಸರ ಅಭಿಯಂತರ ಹರೀಶ್ ಸಜ್ಜನಶೆಟ್ಟಿ, ಮಲ್ಲಣ್ಣ ದೇಸಾಯಿ ಮಾತನಾಡಿದರು. ಕ್ಷೇತ್ರ ಪ್ರಚಾರ ಅಧಿಕಾರಿ ಜಿ.ತುಕಾರಾಮ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಎನ್‌ಎಸ್‌ಎಸ್ ಅಧಿಕಾರಿ ಡಾ.ಮಹದೇವಪ್ಪ ಬೇಲೂರ, ಎಪಿಡಿ ಸಂಸ್ಥೆ ವೀರಣ್ಣ ಬಿರಾದಾರ್ ಇದ್ದರು.
ವಿದ್ಯಾರ್ಥಿ ಹಾಗೂ ಸಾರ್ವಜನಿಕರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ನಗರದ ಅಸೋಸಿಯೇಷನ್ ಫಾರ್ ಪೀಪಲï ವಿತ್ ಡಿಸೆಬಿಲಿಟಿಯಿಂದ ವಿಶೇಷ ಚೇತನರಿಗಾಗಿ ಕೃತಕ ಅಂಗಾAಗ ಜೋಡಣೆಗೆ ನೋಂದಣಿ ಮಾಡಿಕೊಳ್ಳಲಾಯಿತು. ಕೇಂದ್ರ ಸಂವಹನ ಇಲಾಖೆ ನೊಂದಾಯಿತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.