ಜಿಲ್ಲೆ

ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡಲಿ

ನಿಪ್ಪಾಣಿ: ನಿಯಮಿತ ಆರೋಗ್ಯ ತಪಾಸಣೆಯಿಂದ ಆರಂಭಿಕ ಹಂತದಲ್ಲಿರುವ ರೋಗ ಕಂಡುಹಿಡಿಯಲು ಮತ್ತು ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ಶ್ರೀಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲಗೊಂಡಾ ಪಾಟೀಲ ಹೇಳಿದರು.

ಸ್ಥಳೀಯ ಶ್ರೀ ಹಾಲಸಿದ್ಧನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಮಹಾತ್ಮಾ ಗಾಂಧಿ ಆಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಕಬ್ಬು ಕಟಾವು ತಂಡಗಳಿಗೆ ಈಚೆಗೆ ಹಮ್ಮಿಕೊಂಡಿದ್ದ ಆರೋಗ್ಯ ತಪಾಸಣೆ ಉಚಿತ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಎಲ್ಲರೂ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡಬೇಕು. ಉಪಾಧ್ಯಕ್ಷ ಪವನಕುಮಾರ ಪಾಟೀಲ ಮಾತನಾಡಿ, ಆರೋಗ್ಯ ತಪಾಸಣೆ ಉಚಿತ ಶಿಬಿರಗಳು ಬಡವರ ವರದಾನವಾಗಿವೆ ಎಂದರು.

ಮಹಾತ್ಮಾ ಗಾಂಧಿ ಆಸ್ಪತ್ರೆಯ ಎನ್‌ಸಿಡಿ ಸಲಹೆಗಾರ ಆನಂದ ನಾವಿ, ಲ್ಯಾಬ್ ಟೆಕ್ನಿಷಿಯನ್ ಶ್ರೀಕಾಂತ ನಾಗರಾಜು, ಪುಂಡಲೀಕ ಆರೋಗ್ಯ ತಪಾಸಣೆ ನಡೆಸಿದರು. ಕಾರ್ಖಾನೆಯ ನಿರ್ದೇಶಕ ಪ್ರಕಾಶ ಶಿಂಧೆ, ವ್ಯವಸ್ಥಾಪಕ ನಿರ್ದೇಶಕ ಅಪ್ಪಾಸಾಹೇಬ ಶಿರಗಾವಿ, ಕಾರ್ಯಾಲಯ ಅಧೀಕ್ಷಕ ಗಜಾನನ ರಾಮನಕಟ್ಟಿ, ಕಾರ್ಮಿಕ ಅಧಿಕಾರಿ ಸಾಗರ ಜಾಧವ, ಸುರಕ್ಷತಾ ಅಧಿಕಾರಿ ಅಕ್ಷಯ ಪಾಟೀಲ, ಸಹಾಯಕ ಆರೋಗ್ಯ ಮತ್ತು ಸುರಕ್ಷತಾ ಅಧಿಕಾರಿ ರೋಹಿತ ಪರೀಟ, ಅಭಿಜಿತ ಸಾಳುಂಖೆ, ಬಾಳಾಸಾಹೇಬ ಪಾಟೀಲ ಇತರರಿದ್ದರು.