ಜಿಲ್ಲೆ

ಆರೋಗ್ಯವಂತರು ವರ್ಷಕ್ಕೆ 3 ಬಾರಿ ರಕ್ತದಾನ ಮಾಡಿ

ಚಿಕ್ಕಬಳ್ಳಾಪುರ : ಆರೋಗ್ಯವಂತರು ವರ್ಷಕ್ಕೆ ಕನಿಷ್ಠ 3 ಬಾರಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮೀನಾರಾಯಣ ಗುಪ್ತ ಕರೆ ನೀಡಿದರು.

ನಗರದ ಸಿದ್ದೇಶ್ವರ ಸಮುದಾಯ ಭವನದಲ್ಲಿ ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ, ರಾಷ್ಟ್ರೋತ್ಥಾನ ರಕ್ತನಿಧಿ ಕೇಂದ್ರ ಶುಕ್ರವಾರ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.ತಪ್ಪು ಕಲ್ಪನೆ ಸೇರಿ ನಾನಾ ಕಾರಣಗಳ ಹಿನ್ನೆಲೆಯಲ್ಲಿ ಅನೇಕರು ರಕ್ತದಾನಕ್ಕೆ ಮುಂದಾಗುತ್ತಿಲ್ಲ. ಇದರಿಂದ ಶಸ್ತ್ರಚಿಕಿತ್ಸೆಗೊಳಾಗದವರು, ಗಾಯಾಳುಗಳು ಸಕಾಲಕ್ಕೆ ರಕ್ತ ಸಿಗದೇ ಜೀವ ಕಳೆದುಕೊಂಡ ಉದಾಹರಣೆಗಳಿವೆ, ಆದ್ದರಿಂದ ಪ್ರತಿಯೊಬ್ಬರೂ ಮೌಢ್ಯಬದಿಗೊತ್ತಿ ರಕ್ತದಾನಕ್ಕೆ ಮುಂದಾಬೇಕೆಂದರು.

ರಕ್ತದಾನದಿಂದ ದೇಹದಲ್ಲಿ ಹೊಸ ರಕ್ತ ಕಣಗಳು ಉತ್ಪತ್ತಿಯಾಗಿ ಹೊಸ ಚೈತನ್ಯ ಬರುತ್ತದೆ. ಹೃದ್ರೋಗ, ರಕ್ತದೊತ್ತಡ ಸೇರಿ ಅನಾರೋಗ್ಯದ ಹಲವು ಸಮಸ್ಯೆಗಳು ದೂರವಾಗುತ್ತವೆ ಎಂದು ಭಗತ್‌ಸಿಂಗ್ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ ಸಂದೀಪ್ ರೆಡ್ಡಿ ತಿಳಿಸಿದರು.

ವಿಜ್ಞಾನ ಹಾಗೂ ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಇದುವರೆಗೂ ಸಾಧ್ಯವಾಗಿಲ್ಲ. ಆದರಿಂದ ರಕ್ತದ ಕೊರತೆ ನೀಗಿಸುವ ನಿಟ್ಟಿನಲ್ಲಿ ಸಂಘ ಸಂಸ್ಥೆಗಳು ಶಿಬಿರ ನಡೆಸಲು ಆದ್ಯತೆ ನೀಡಬೇಕು ಎಂದು ಯುವಮೋರ್ಚಾ ಮಾಜಿ ಅಧ್ಯಕ್ಷ ಎಸ್.ಆರ್.ಎಸ್.ದೇವರಾಜ್ ಸಲಹೆ ನೀಡಿದರು.ಬಿಜೆಪಿ ನಗರ ಮಂಡಲ ಅಧ್ಯಕ್ಷ ವಿ.ಶ್ರೀನಿವಾಸ್, ಗ್ರಾಮೀಣ ಮಂಡಲ ಅಧ್ಯಕ್ಷ ಕೆ.ಎಸ್.ಕೃಷ್ಣಾರೆಡ್ಡಿ, ಮುಖಂಡರಾದ ಸಿ.ಬಿ.ಕಿರಣ್, ಅಂಬರೀಷ್ ಇತರರಿದ್ದರು.