ಚಿತ್ರದುರ್ಗ: ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ನ. 26ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಹಾಗೂ ತಳಕು ಗ್ರಾಮಕ್ಕೆ ಮಧ್ಯಾಹ್ನ 1.30ಕ್ಕೆ ಭೇಟಿ ನೀಡಲಿದ್ದು, ಬರದಿಂದ ಬೆಳೆ ಹಾನಿಯಾಗಿರುವ ರೈತರ ಹೊಲಗಳನ್ನು ವೀಕ್ಷಿಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಚಳ್ಳಕೆರೆ ಮಾರ್ಗವಾಗಿ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.