ಜಿಲ್ಲೆ

ಆರ್.ಟಿ.ಓ ಕಚೇರಿಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಭೇಟಿ

Hassan - Mohan Kanthur

ಹಾಸನ: ನಗರದ ಹೊರ ವಲಯದಲ್ಲಿರುವ ಆರ್.ಟಿ.ಒ ಕಚೇರಿಗೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಬುಧವಾರ ಭೇಟಿ ನೀಡಿ ಆರ್.ಟಿ.ಒ ರಾಜ್ ಕುಮಾರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಸಾರ್ವಜನಿಕರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ, ಎಲ್ಲಾ ಕಡತಗಳನ್ನು ಶೀಘ್ರವೇ ಬಗೆಹರಿಸಬೇಕು. ಇಲಾಖೆಯಲ್ಲಿ ಇಲ್ಲಿಯವರೆಗೂ ಎಷ್ಟು ಕಡತಗಳು ಬಾಕಿ ಏಕೆ ಉಳಿಸಿಕೊಂಡಿದ್ದಾರ ಎಂದು ಅಧಿಕಾರಿಯ ವಿರುದ್ಧ ತೀರ್ವ ಅಸಮಾಧಾನ ವ್ಯಕ್ತಪಡಿಸಿದರು.
ಕಚೇರಿಯಲೇ ಸಾರಿಗೆ ಸಚಿವರಿಗೆ ಕರೆ ಮಾಡಿದ ರೇವಣ್ಣ, ಕಚೇರಿಯಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ತಿಳಿಸಿದರು. ಅವುಗಳಿಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಸಾರಿಗೆ ಸಚಿವರು ಹಾಗೂ ಕಾರ್ಯದರ್ಶಿಗಳು ಸ್ಥಳಕ್ಕೆ ಬರುವವರೆಗೂ ಧರಣಿ ನಡೆಸುವುದಾಗಿ ಎಚ್ಚರಿಸಿದರು.
ಬಾಕಿ ಇಟ್ಟಿರುವ ಎಲ್ಲಾ ಕಡತ ಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ, ಸಾರ್ವಜನಿಕರಿಗೆ ಸ್ಪಂದಿಸಬೇಕು. ರೈತರು, ಬಡವರು ಬಂದಾಗ ಅವರನ್ನು ಕಾಯಿಸದೆ ಬೇಗ ಕೆಲಸ ಮಾಡಿಕೊಟ್ಟು, ಅವರಿಗೆ ನೆರವಾಗಬೇಕು. ಇಲ್ಲವಾದರೆ ಸ್ಥಳೀಯ ಶಾಸಕರು ಹಾಗೂ ತನ್ನ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಈ ವೇಳೆ ಶಾಸಕ ಎಚ್.ಪಿ.ಸ್ವರೂಪ್ ಪ್ರಕಾಶ್, ನಗರಸಭೆ ಅಧ್ಯಕ್ಷ ಚಂದ್ರೇಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.