ಸೋಮವಾರಪೇಟೆ ತಾಲೂಕಿನ ಗಣಗೂರು ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳಿಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು. 
ಜಿಲ್ಲೆ

ಆರ್ಟಿಫಿಶಿಯಲ್ ಇಂಟಲಿಜೆನ್ಸ್ ತರಬೇತಿ

ಎಂ.ರವಿ

ಸೋಮವಾರಪೇಟೆ: ತಾಲೂಕಿನ ಗಣಗೂರು ಗ್ರಾಮ ಪಂಚಾಯಿತಿ ಗ್ರಂಥಾಲಯದಲ್ಲಿ ವಿದ್ಯಾರ್ಥಿಗಳಿಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಬಗ್ಗೆ ತರಬೇತಿ ಕಾರ್ಯಕ್ರಮ ಗುರುವಾರ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸದಸ್ಯ ಸಿದ್ದಲಿಂಗಪ್ಪ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ನಿರಂತರ ಕಲಿಕೆಯಿಂದ ಮಾತ್ರ ಜ್ಞಾನ ಸಂಪಾದಿಸಲು ಸಾಧ್ಯ. ವಿದ್ಯಾರ್ಥಿಗಳು ಸಮಯವನ್ನು ವ್ಯರ್ಥ ಮಾಡಬಾರದು. ಬಿಡುವಿನ ಸಮಯದಲ್ಲಿ ಗ್ರಾಮ ಪಂಚಾಯಿತಿಯ ಗ್ರಂಥಾಲಯಗಳಿಗೆ ಭೇಟಿ ನೀಡಿ, ಪುಸ್ತಕಗಳನ್ನು ಓದಬೇಕು. ಕಂಪ್ಯೂಟರ್ ಶಿಕ್ಷಣ ಅತ್ಯವಶ್ಯಕವಾಗಿದೆ ಎಂದರು. ವಿಕಸನ ಕಾರ್ಯಕ್ರಮದ ಜಿಲ್ಲಾ ಸಂಯೋಜಕರಾದ ರಕ್ಷಿತ್, ದಿಲೀಪ್, ಗ್ರಂಥಾಲಯ ಮೇಲ್ವಿಚಾರಕ ಚೇತನ್ ಹಾಗೂ ವಿದ್ಯಾರ್ಥಿಗಳು ಇದ್ದರು.