ಜಿಲ್ಲೆ

ಆರ್ಥಿಕ ನೆರವು ಅರ್ಜಿ ಆಹ್ವಾನ

ಚಾಮರಾಜನಗರ: ನೇಕಾರರ ಸಮ್ಮಾನ್ ಯೋಜನೆಯಡಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ಸಂಬಂಧಿಸಿದ ಇತರೆ ಚಟುವಟಿಕೆಗಳಲ್ಲಿ ತೊಡಗಿರುವ ನೇಕಾರರಿಗೆ ಆರ್ಥಿಕ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ನೇಕಾರರ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಹಾಗೂ ಇತರೆ ಕೈಮಗ್ಗ ಚಟುವಟಿಕೆಗಳನ್ನು ನಡೆಸುವ ಕೈಮಗ್ಗ ನೇಕಾರರು, ವಿದ್ಯುತ್ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳ ನೇಕಾರರು ಹಾಗೂ ಕಾರ್ಮಿಕರಿಗೆ ವಾರ್ಷಿಕವಾಗಿ 5 ಸಾವಿರ ರೂ. ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ ಮೂಲಕ ನೀಡಲಾಗುತ್ತದೆ.

ಯೋಜನೆಯಡಿ 2024-25ನೇ ಸಾಲಿನಲ್ಲಿ ಸೌಲಭ್ಯ ಪಡೆದಿರುವ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಪಟ್ಟಿಯಲ್ಲಿ ಪ್ರಸ್ತುತ ಸಾಲಿನಲ್ಲಿ ಮೃತರಾಗಿರುವ, ನೇಕಾರಿಗೆ ವೃತ್ತಿ ಬಿಟ್ಟಿರುವ, ಬೇರೆ ಕಡೆ ಸ್ಥಳಾಂತರಗೊಂಡಿರುವ ನೇಕಾರನ್ನು ಹೊರತುಪಡಿಸಿ ನೇಯ್ಗೆ ಚಟುವಟಿಕೆಯಲ್ಲಿ ತೊಡಗಿರುವ ಮತ್ತು 2025-26ನೇ ಸಾಲಿನ ಪ್ರಧಾನಮಂತ್ರಿ ಜೀವನ್ ಜ್ಯೋತಿ ಭೀಮಾ ಯೋಜನೆ (ಒಎಎಃಙ) ಮತ್ತು ಪ್ರಧಾನಮಂತ್ರಿ ಸುರಕ್ಷಾ ಭೀಮಾ ಯೋಜನೆಯಡಿ (ಒಃಙ) ನೋಂದಣಿಯಾಗಿರುವ ಕೈಮಗ್ಗ ನೇಕಾರರು ಮಾತ್ರ ಸ್ಥಳೀಯ ಕೈಮಗ್ಗ ನೇಕಾರ ಸಹಕಾರ ಸಂಘಗಳ ಮೂಲಕ ಅಥವಾ ನೇರವಾಗಿ ನಗರದ ಜಿಲ್ಲಾಡಳಿತ ಭವನದ 2ನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ: 222ರ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರ ಕಚೇರಿಗೆ ಆ.16ರೊಳಗೆ ವಿವರಗಳನ್ನು ಸಲ್ಲಿಸಬೇಕು.

ಕಳೆದ ಸಾಲಿನಲ್ಲಿ ನೋಂದಣಿಯಾಗದೇ ಇರುವ ನೇಕಾರಿಕೆ ಚಟುವಟಿಕೆಯಲ್ಲಿ ತೊಡಗಿರುವ ಅರ್ಹ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರು ಹೊಸದಾಗಿ ಅರ್ಜಿ ನಮೂನೆಯೊಂದಿಗೆ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ನೇಕಾರರ ಗುರುತಿನ ಚೀಟಿ ಮತ್ತು ನೇಕಾರರ ವೃತ್ತಿಯಲ್ಲಿ ತೊಡಗಿರುವ ಪೋಟೋ ಪ್ರತಿ ವಿವರಗಳೊಂದಿಗೆ ಆಗಸ್ಟ್ 16ರೊಳಗೆ ಹೊಸದಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರ ಕಚೇರಿ ದೂ.ಸಂ 08226-222883 ಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.