ಚಿಕ್ಕಮಗಳೂರು: ಜನರಲ್ಲಿ ಆರ್ಥಿಕ ಶಕ್ತಿ ತುಂಬಲು ಪಂಚ ಗ್ಯಾರಂಟಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದ್ದು, ಆರ್ಥಿಕವಾಗಿ ಸಂಕಷ್ಟದಲ್ಲಿರುವವರಿಗೆ ಈ ಯೋಜನೆ ಅನುಕೂಲವಾಗಿದೆ ಎಂದು ಇಂಧನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬೆಳವಾಡಿ ಕೆರೆಗೆ ಶುಕ್ರವಾರ ಬಾಗಿನ ಅರ್ಪಿಸಿ ಮಾತನಾಡಿದ ಅವರು, ನಮ್ಮ ಜನಸಂಖ್ಯೆಯಲ್ಲಿ ಶೇ. ೫೦ರಷ್ಟು ಮಹಿಳೆಯರಿದ್ದಾರೆ. ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಿದರೆ ಇಡೀ ಕುಟುಂಬಕ್ಕೆ ಬಲ ಬಂದAತಾಗಲಿದೆ. ಯುವಕರಿಗೆ ಯುವನಿಧಿ, ೧.೬೦ ಕೋಟಿ ಜನರಿಗೆ ೨೦೦ ಯೂನಿಟ್‌ಗಳಷ್ಟು ಉಚಿತ ವಿದ್ಯುತ್ ನೀಡುವ ವ್ಯವಸ್ಥೆ, ಅಂತೆಯೇ ಮಹಿಳೆಯರಿಗೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ, ಗೃಹಲಕ್ಷ್ಮೀ ಯೋಜನೆಯಡಿ ನೀಡಲಾಗುವ ೨೦೦೦ ರೂ.ಗಳು ಸರಾಸರಿ ಪರಿಗಣಿಸಿದರೆ ಒಂದು ಕುಟುಂಬಕ್ಕೆ ಮಾಸಿಕ ಸರಾಸರಿ ೫ ಸಾವಿರ ರೂ. ದೊರೆತಂತಾಗುತ್ತಿದೆ ಎಂದರು.
ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸುವ ದೃಷ್ಟಿಯಿಂದ ಸೋಲಾರ್ ವ್ಯವಸ್ಥೆಯನ್ನು ಹೆಚ್ಚು ಮಾಡಲು ಯೋಜನೆ ರೂಪಿಸಲಾಗಿದೆ. ಜೊತೆಗೆ ಶರಾವತಿ ಪಂಪ್ ಸ್ಟೋರೇಜ್ ನೀರು ಬಳಸಿ ೨ ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಕೇಂದ್ರ ಹಾಗೂ ರಾಜ್ಯದ ಅನುಮತಿ ಕೋರಲಾಗಿದೆ. ಪಾವಗಡದಲ್ಲಿ ಇನ್ನೂ ೨ ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಲು ಮುಂದಾಗಿz್ದೆÃವೆ. ಇದಕ್ಕೆ ರೈತರಿಂದ ಗುತ್ತಿಗೆ ಪಡೆದ ಭೂಮಿಗೆ ಸರ್ಕಾರ ಹಣ ಪಾವತಿಸುತ್ತಿದೆ. ಕುಸುಮ್-ಸಿ ಯೋಜನೆಯಡಿ ೨,೫೦೦ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಸಂಬAಧ ಖಾಸಗಿಯವರು ಬಂಡವಾಳ ಹೂಡಲಿದ್ದು, ಅವರು ೨ ಅಥವಾ ೨.೧೦ ರೂ.ಗಳಿಗೆ ಪ್ರತಿ ಯುನಿಟ್ ಕೊಡಲು ಮುಂದೆ ಬಂದಿದ್ದಾರೆ. ಇದಕ್ಕೆ ಸುಮಾರು ೧೦ ಸಾವಿರ ಕೋಟಿ ರೂ. ಬಂಡವಾಳ ಹೂಡುವ ಅವಶ್ಯಕತೆ ಇದೆ. ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗದ ಕಡೆಗಳಲ್ಲಿ ಕೊಳವೆ ಬಾವಿಗಳಿಗೆ ಸೋಲಾರ್ ಮೂಲಕ ವಿದ್ಯುತ್ ಒದಗಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದರು.
ಶಾಸಕ ಎಚ್.ಡಿ.ತಮ್ಮಯ್ಯ ಮಾತನಾಡಿ, ಕಳೆದ ೨೫ ವರ್ಷಗಳಿಂದೀಚೆಗೆ ದೇವನೂರು ಕೆರೆ ಮಳೆಯಿಂದ ಒಮ್ಮೆ ಮಾತ್ರ ತುಂಬಿತ್ತು. ಹಿಂದೆ ಇದೊಂದು ತೆಂಗು ಹಾಗೂ ಅಡಕೆಯ ನಾಡಾಗಿತ್ತು. ಬರಗಾಲ ಬಂದು ಈ ಎರಡು ಕೆರೆಗೆ ನೀರಿಲ್ಲದೆ ಬರಡಾಯಿತು. ಬಹುಶಃ ಬೆಳವಾಡಿ, ದೇವನೂರಿನಂತಹ ದೊಡ್ಡ ಗ್ರಾಮಗಳಿಂದ ಜನರು ಬೆಂಗಳೂರಿಗೆ ಗುಳೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಸಕಾಲದಲ್ಲಿ ನೀರು ಮತ್ತು ವಿದ್ಯುತ್ ದೊರಕಿದರೆ ಇಲ್ಲಿನ ರೈತರು ಉತ್ತಮ ಬೆಳೆ ಬೆಳೆದು ಬೆಲೆ ಸಿಕ್ಕಿದ್ದಲ್ಲಿ ಅವರೆಲ್ಲಾ ಸ್ವಾಭಿಮಾನಿಗಳಾಗಿ ಬದುಕುತ್ತಾರೆ. ಅನೇಕ ರೈತ ಮುಖಂಡರು ಈ ಕೆರೆಯನ್ನು ತುಂಬಿಸಲು ಪ್ರಯತ್ನಿಸಿದ್ದರು ಎಂದರು.
ಈ ಹಿಂದೆ ಮಲ್ಲಿಕಾರ್ಜುನ ಪ್ರಸನ್ನ ಅವರು ಸಣ್ಣ ನೀರಾವರಿ ಸಚಿವರಾದ ಬಳಿಕ ಜನಪ್ರತಿನಿಧಿಗಳಾಗಿದ್ದ ಕೆ.ಬಿ.ಮಲ್ಲಿಕಾರ್ಜುನ್, ಧರ್ಮೇಗೌಡರು, ಸಿ.ಟಿ.ರವಿ ಇವರುಗಳು ಕರಗಡ ಯೋಜನೆಗೆ ಶ್ರಮಪಟ್ಟಿದ್ದಾರೆ. ಆದರೆ ಕರಗಡ ಯೋಜನೆ ಕಳಸಾಪುರ ಮತ್ತು ಈಶ್ವರಹಳ್ಳಿ ಕೆರೆಗಳನ್ನು ಮಾತ್ರ ತುಂಬಲು ಶಕ್ತವಾಗಿದೆ. ಈ ಕೆರೆಗಳಿಗೆ ನೀರು ತುಂಬಿಸಲು ರಣಘಟ್ಟ ಯೋಜನೆ, ಭದ್ರಾ ಉಪ ಕಣಿವೆ ಯೋಜನೆ ಇದ್ದರೂ ಈ ಯೋಜನೆಗಳು ಕೈಗೂಡಲು ಇನ್ನೂ ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ನೀರಾವರಿ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್ ಅವರನ್ನು ಜಿಲ್ಲೆಯ ಉಸ್ತುವಾರಿ ಸಚಿವ ಜಾರ್ಜ್ ನೇತೃತ್ವದಲ್ಲಿ ಭೇಟಿ ಮಾಡಿ ಮನವಿ ಮಾಡಿದ ಫಲವಾಗಿ ಎತ್ತಿನಹೊಳೆ ನೀರು ಇಲ್ಲಿಯವರೆಗೆ ಹರಿದು ಬಂದಿದೆ. ಆದರೆ ಮುಂದೆ ರಣಘಟ್ಟ ಯೋಜನೆಯನ್ನು ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯೆ ಗಾಯತ್ರಿ ಶಾಂತೇಗೌಡ, ಭದ್ರ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮAತ್, ರಾಜ್ಯ ಪರಿಸರ ತಜ್ಞರ ಮೌಲ್ಯ ಮಾಪನ ಸಮಿತಿ ಅಧ್ಯಕ್ಷ ಎ.ಎನ್.ಮಹೇಶ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನAದಸ್ವಾಮಿ, ಜಿಪಂ ಮಾಜಿ ಅಧ್ಯಕ್ಷೆ ರೇಖಾ ಹುಲಿಯಪ್ಪ ಗೌಡ, ಮುಖಂಡರಾದ ಎಚ್.ಪಿ.ಮಂಜೇಗೌಡ, ತಾಪಂ ಮಾಜಿ ಅಧ್ಯಕ್ಷ ಬಸವರಾಜ್, ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್, ಜಿಪಂ ಸಿಇಒ ಎಚ್.ಎಸ್‌ಕೀರ್ತನಾ, ಎಸ್‌ಪಿ ವಿಕ್ರಮ ಅಮಟೆ, ತಹಸೀಲ್ದಾರ್ ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು.
ಬಿಜೆಪಿಗೆ ಠಕ್ಕರ್ ಕೊಟ್ಟ ಕೆ.ಜೆ.ಜಾರ್ಜ್
ನಾನು ಪ್ರಚಾರಕ್ಕಾಗಿ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿಲ್ಲ. ಜನ ನಮ್ಮನ್ನು ಗೆಲ್ಲಿಸಿದ್ದಾರೆ. ಹೀಗಾಗಿ ನಾನು ಜನರ ಕೆಲಸ ಮಾಡುತ್ತಿz್ದÉÃನೆ. ಬಿಜೆಪಿ ನಾಯಕರಿಗೆ ಮಾಹಿತಿ ಕೊರತೆಯಿದೆ. ಹೀಗಾಗಿ ಏನೇನೋ ಆರೋಪ ಮಾಡುತ್ತಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಬಿಜೆಪಿ ವಿರುದ್ಧ ಕಿಡಿಕಾರಿದರು.
ನಾನು ಏನೇನು ಕೆಲಸ ಮಾಡಿz್ದÉÃನೆ ಎಂಬ ದಾಖಲೆಗಳು ನನ್ನ ಬಳಿ ಇವೆ. ಆ ದಾಖಲೆಗಳನ್ನು ಬೇಕಿದ್ದರೆ ಬಿಜೆಪಿ ನಾಯಕರಿಗೆ ಕೊಡುತ್ತೇನೆ. ಆಮೇಲೆ ಅವರು ನನ್ನ ಬಗ್ಗೆ ಆರೋಪ ಮಾಡಲಿ ನೋಡೋಣ ಎಂದು ಸವಾಲು ಹಾಕಿದ ಅವರು, ನಮಗೆ ಅಧಿಕಾರ ಕೊಟ್ಟಿರುವುದು ಜನ. ಅಧಿಕಾರ ಎನ್ನುವುದು ಶಾಶ್ವತವಲ್ಲ. ಆದರೆ ಅಧಿಕಾರ ಸಿಕ್ಕಾಗ ಜನರಿಗೆ ಒಳ್ಳೆಯದಾಗುವ ಕೆಲಸ ಮಾಡಬೇಕು. ನಾನು ಅದೇ ನಿಟ್ಟಿನಲ್ಲಿ ಮುಂದುವರಿಯುತ್ತಿz್ದÉÃನೆ ಎಂದರು.
ಈ ಹಿಂದಿನ ಎಲ್ಲ ಉಸ್ತುವಾರಿ ಸಚಿವರಿಗಿಂತ ಜಿಲ್ಲೆಯಲ್ಲಿ ಹೆಚ್ಚು ಪ್ರವಾಸ ಮಾಡಿದವರು ಕೆ.ಜೆ.ಜಾರ್ಜ್ ಅವರು. ತಾಲೂಕು ಮಟ್ಟದಲ್ಲಿಯೂ ಜನ ಸಂಪರ್ಕ ಸಭೆಗಳನ್ನು ನಡೆಸಿ ಜನರ ಅಹವಾಲು ಆಲಿಸುವ ಕೆಲಸ ಮಾಡಿದ್ದಾರೆ. ಆದರೂ ಬಿಜೆಪಿ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಹೀಗೆ ಆರೋಪ ಮಾಡುವವರಿಗೆ ಅರಿವಿನ ಕೊರತೆಯಿದೆ.
ಎಚ್.ಡಿ.ತಮ್ಮಯ್ಯ, ಚಿಕ್ಕಮಗಳೂರು ಶಾಸಕ