ಗುಂಡ್ಲುಪೇಟೆ: ಕಳೆದ ಎರಡು ದಿನಗಳಿಂದ ತಾಲೂಕಿನಲ್ಲಿ ಮಳೆಯಾಗುತ್ತಿದ್ದು ಭಾನುವಾರ ರಾತ್ರಿ ಸುರಿದ ಆಲಿಕಲ್ಲು ಮಳೆಗೆ ಬೆಳೆ ಹಾನಿಯಾಗಿದೆ.
ಭಾನುವಾರ ರಾತ್ರಿ ಸುರಿದ ಆಲಿಕಲ್ಲು ಮಳೆಗೆ ತಾಲೂಕಿನ ತೆರಕಣಾಂಬಿಹುಂಡಿ ಗ್ರಾಮದ ಮಹೇಶ್ ಹಾಗೂ ಮಲ್ಲು ಎಂಬುವರ ಜಮೀನುಗಳಲ್ಲಿ ಬೆಳೆದಿದ್ದ ಐನೂರಕ್ಕೂ ಹೆಚ್ಚಿನ ಬಾಳೆ ಗಿಡಗಳು ನೆಲಕಚ್ಚಿವೆ. ಸ್ಥಳಕ್ಕೆ ತೆರಕಣಾಂಬಿ ನಾಡಕಚೇರಿ ಕಂದಾಯಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು. ಶೀಘ್ರ ಪರಿಹಾರ ಕೊಡಿಸುವ ಭರವಸೆ ನೀಡಿದರು.