ಜಿಲ್ಲೆ

ಆಲೂರು ಸಿದ್ದಾಪುರ ಶಾಲೆಗೆ ಸಮಗ್ರ ಪ್ರಶಸ್ತಿ

ಶನಿವಾರಸಂತೆ: ಇತ್ತೀಚೆಗೆ ಸೋಮವಾರಪೇಟೆಯಲ್ಲಿ ನಡೆದ 2025-26ನೇ ಸಾಲಿನ ಪ್ರಾಥಮಿಕ ಶಾಲೆಗಳ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸಮೀಪದ ಆಲೂರು ಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಬಾಲಕ, ಬಾಲಕಿಯರು ವಿವಿಧ ಕ್ರೀಡಾ ವಿಭಾಗಳಲ್ಲಿ ಭಾಗವಹಿಸಿ ಪ್ರಥಮ, ದ್ವಿತೀಯ ಸ್ಥಾನ ಪಡೆದು ಸಮಗ್ರ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಬಾಲಕರ ವಿಭಾಗದ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ, ಬಾಲಕಿಯರ ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ, ಬಾಲಕರ ಥ್ರೋಬಾಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಬಾಲಕರ 400 ಮೀಟರ್ ಅಥ್ಲೆಟಿಕ್ಸ್‌ನಲ್ಲಿ ಪ್ರಥಮ ಸ್ಥಾನ, 600 ಮೀಟರ್ ಅಥ್ಲೆಟಿಕ್ಸ್‌ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡರೆ, ಬಾಲಕಿಯರು 600 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದು 4+100 ಮೀಟರ್ ರಿಲೇ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಎಸ್.ಕೆ.ಉದಯ್ ಕುಮಾರ್ ಹಾಗೂ ತಂಡದ ತರಬೇತುದಾರ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಎಚ್.ಪಿ.ಕರುಂಬಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.