ಜಿಲ್ಲೆ

ಆಶಾ ಕಾರ್ಯಕರ್ತೆಯರಿಗೆ ತರಬೇತಿ ನೀಡಿ

ಚನ್ನಮ್ಮ ಕಿತ್ತೂರ: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಟಾಸ್ಕ್‌ಫೋರ್ಸ್ ರಚಿಸಿ ಗ್ರಾಪಂ ಸಿಬ್ಬಂದಿ, ಅಂಗನವಾಡಿ, ಆಶಾ ಕಾರ್ಯಕತೆರ್ಯರಿಗೆ ಕೋವಿಡ್ ಟೆಸ್ಟ್ ಮಾಡಲು ಸೂಕ್ತ ತರಬೇತಿ ನೀಡಿ ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ ಅವರು ಟಿಎಚ್‌ಒಗೆ ಸೂಚಿಸಿದರು.

ತಾಲೂಕಿನ ಹೂಲಿಕಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇರ್ ಸೆಂಟರ್‌ಗೆ ಗುರುವಾರ ಭೇಟಿ ನೀಡಿ ವ್ಯವಸ್ಥೆ ಪರಿಶೀಲಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಆಕ್ಸಿಜನ್ ಪೂರೈಕೆ ಸಮಸ್ಯೆಯಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಓಡಿಶಾ, ಗುಜರಾತ್ ಮತ್ತಿತರ ರಾಜ್ಯಗಳಿಂದ ಕರ್ನಾಟಕಕ್ಕೆ ಆಕ್ಸಿಜನ್ ಪೂರೈಕೆ ಮಾಡುತ್ತಿದೆ. ರಾಜ್ಯದಲ್ಲಿ ಲಭ್ಯವಿರುವ ವೆಂಟಿಲೇಟರ್‌ಗಳನ್ನು ಗ್ರಾಮೀಣ ಪ್ರದೇಶಗಳಿಗೆ ಪೂರೈಕೆ ಮಾಡಬೇಕಾಗಿದೆ. ಇದಕ್ಕೆ ಕೆಲ ತಾಂತ್ರಿಕ ಸಮಸ್ಯೆ ಇದ್ದು, ಅದನ್ನು ಶೀಘ್ರ ಬಗೆಹರಿಸಲಾಗುವುದು ಎಂದರು. ತಾಲೂಕು ವೈದ್ಯಾಧಿಕಾರಿ ಎಸ್.ಎಸ್. ಸಿದ್ದಣ್ಣವರ ಮಾತನಾಡಿ, ತಾಲೂಕಿನಲ್ಲಿ ವೈದ್ಯಕೀಯ ಸಿಬ್ಬಂದಿ ಸಮಸ್ಯೆಯಿದ್ದು, ಶೀಘ್ರ ಸಿಬ್ಬಂದಿ ನಿಯೋಜಿಸಬೇಕು ಎಂದು ಪಿ. ರವಿಕುಮಾರ ಅವರ ಗಮನ ಸೆಳೆದರು. ಎಸಿ ಶಶಿಧರ ಬಗಲಿ, ತಹಸೀಲ್ದಾರ್ ಸೋಮಲಿಂಗಪ್ಪ ಹಾಲಗಿ, ಡಿಎಸ್ಪಿ ಶಿವಾನಂದ ಕಟಗಿ, ಸಿಪಿಐ ಮಂಜುನಾಥ ಕುಸುಗಲ್, ಬಿಇಒ ರವೀಂದ್ರ ಬಳಿಗಾರ, ಕಂದಾಯ ನೀರಿಕ್ಷಕ ಬಿ.ವಿ. ಬಡಗಾವಿ, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಎಲ್.ಬಿ. ಹಲಕರ್ಣಿಮಠ, ಕಂದಾಯ ಇಲಾಖೆ ಸಿಬ್ಬಂದಿ ಇದ್ದರು.