ಯಾದಗಿರಿ: ನಗರದ ಆಶ್ರಯ ಲೇಔಟ್‌ನಲ್ಲಿ ನಡೆದಿರುವ ಭಾರಿ ಪ್ರಮಾಣ ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ನಿವೇಶನ ಮತ್ತು ಕಟ್ಟಡಗಳ ತೆರವಿಗೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ ತಿಳಿಸಿದ್ದಾರೆ.
ನಗರದ ಪಿಲ್ಟರ್ ಬೆಡ್ ಹಿಂದಿನ ಆಶ್ರಯ ಲೇಔಟ್‌ನಲ್ಲಿ ಕೆಲ ನಿವಾಸಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಯಾವುದೇ ಪರವಾನಿಗೆ ಇಲ್ಲದೆ ಮನೆ ಕಟ್ಟಿಕೊಂಡಿz್ದÁರೆ ಎನ್ನುವ ಸಾರ್ವಜನಿಕರ ದೂರು ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗ್ಗೆ ನಗರಸಭೆ ಸದಸ್ಯರು ಹಾಗೂ ಪೌರಾಯುಕ್ತರ ತಂಡದೊAದಿಗೆ ಭೇಟಿ ನೀಡಿ ಪರಿಶೀಲಿಸಿದ ಅಧ್ಯಕ್ಷರು, ಕೂಡಲೆ ಕಠಿಣ ಕ್ರಮ ತೆಗೆದುಕೊಳ್ಳುವ ಮೂಲಕ ನಗರಸಭೆ ಆಸ್ತಿ ಉಳಿಸಲಾಗುವುದು ಎಂದು ಹೇಳಿದರು.
ನಿಜವಾದ ಫಲಾನುಭವಿಗಳಿಗೆ ಯಾವುದೇ ತೊಂದರೆ ಮಾಡುವುದಿಲ್ಲ, ಅಕ್ರಮವಾಗಿ ಆಶ್ರಯ ನಿವೇಶನ ಒತ್ತುವರಿ ಮಾಡಿಕೊಂಡು ಮನೆ ನಿರ್ಮಿಸಿ ಮಾರಾಟ ಮಾಡಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಾಗುವುದು, ಇದರಲ್ಲಿ ಯಾವುದೇ ಮುಲಾಜಿಲ್ಲ ಎಂದು ಸ್ಥಳದಲ್ಲಿದ್ದವರಿಗೆ ಹೇಳಿದರು.
ಸ್ಥಳ ಪರಿಶೀಲನೆ ವೇಳೆ ಸುಮಾರು ೩೦ಕ್ಕೂ ಹೆಚ್ಚು ಖಾಲಿ ನಿವೇಶನ ಕಂಡು ಬಂದರೆ, ಇದೇ ವೇಳೆ ಜೆಸ್ಕಾಂ ಮೆನ್ ಲೈನ್ ವಿದ್ಯುತ್ ಸರಬರಾಜಿಗಾಗಿ ಹಾಕಲಾಗಿರುವ ಹೈಟೆನ್ಸ್ ತಂತಿಗಳ ಕೆಳಗಡೆಯೇ ಕೆಲ ಜನರು ಅಕ್ರಮವಾಗಿ ಮನೆಗಳನ್ನು ನಿರ್ಮಿಸಿಕೊಂಡಿರುವುದು ಕಣ್ಣಾರೆ ಕಂಡ ಅಧ್ಯಕ್ಷರು, ಇಂತಹ ಅಪಾಯ ಸ್ಥಳದಲ್ಲಿ ಮನೆ ನಿರ್ಮಿಸಿಕೊಂಡಿದ್ದೀರಿ, ಇದರಿಂದ ಅನಾಹುತವಾದರೆ ಯಾರು ಹೊಣೆ ? ಕೂಡಲೇ ಜೆಸ್ಕಾಂ ಇಲಾಖೆಗೆ ಪತ್ರ ಬರೆದು ಕ್ರಮಕೈಗೊಳ್ಳವಂತೆ ಸ್ಥಳದಲ್ಲಿದ್ದ ಪೌರಾಯುಕ್ತ ಉಮೇಶ ಚವ್ಹಾಣ್ ಅವರಿಗೆ ತಾಕೀತು ಮಾಡಿದರು.
ಈ ವೇಳೆ ನಗರಸಭೆ ಉಪಾಧ್ಯP್ಷÀ ರುಖಿಯಾ ಬೇಗಂ, ಸದಸ್ಯರಾದ ವಿಜಯಲಕ್ಷಿö್ಮÃ, ಮಂಜುನಾಥ ದಾಸನಕೇರಿ, ಅಂಬಯ್ಯ ಶಾಬಾದಿ, ಚನ್ನಕೇಶಗೌಡ ಬಾಣತಿಹಾಳ, ಮಶೆಪ್ಪ ನಾಯಕ, ಹಣಮಂತ ನಾಯಕ, ಹಣಮಂತ ಇಟಗಿ, ವಾಹಬ್, ಇಸ್ಮಾಯಿಲ್‌ಖಾನ್, ವೆಂಕಟರಡ್ಡಿ ಹೊನಕೇರಿ, ಮನ್ಸೂರ್ ಅಹ್ಮದ್, ಗಣೇಶ ದುಪ್ಪಲ್ಲಿ, ಖಲೀಂ, ಚಂದ್ರಕಾAತ ಮಡ್ಡಿ ಹಾಗೂ ನಗರಸಭೆ ಎಇಇ ರಜನಿಕಾಂತ ಶೃಂಗೇರಿ, ಪರಿಸರ ಅಭಿಯಂತರ ಪ್ರಶಾಂತ, ಕಂದಾಯ ಅಧಿಕಾರಿ ಅಂಬಿಕೇಶ್ವರ, ಮಲ್ಲಿಕಾರ್ಜುನ ಕುರಕುಂಬಳ ಇತರರಿದ್ದರು.