ಮದ್ದೂರು: ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ದೇವಾಲಯಗಳಲ್ಲಿ ಕೊನೆಯ ಆಷಾಢ ಶುಕ್ರವಾರದ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.
ಮದ್ದೂರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಮದ್ದೂರಮ್ಮ ದೇಗುಲದಲ್ಲಿ ಕೊನೆಯ ಆಷಾಢ ಶುಕ್ರವಾರದ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು ಹಾಗೂ ದೇವಿಗೆ ವಿಶೇಷವಾಗಿ ಅಲಂಕಾರ ಮಾಡಿರುವುದು ಭಕ್ತರ ಗಮನ ಸೆಳೆಯಿತು.
ಮಹಿಳೆಯರು ದೇವರಿಗೆ ನಿಂಬೆಹಣ್ಣಿನ ಆರತಿ, ಬೆಲ್ಲದ ಆರತಿ ಮಾಡಿ, ಮಡಿಲಕ್ಕಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತೀರ್ಥ, ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ತೈಲೂರಮ್ಮನಿಗೆ ಒಬ್ಬಟ್ಟಿನ ಅಲಂಕಾರ: ತೈಲೂರು: ತಾಲೂಕಿನ ತೈಲೂರು ಗ್ರಾಮದ ಶಕ್ತಿ ದೇವತೆ ತೈಲೂರಮ್ಮನವರಿಗೆ ಆಷಾಢ ಶುಕ್ರವಾರ ಅಂಗವಾಗಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ದೇವರಿಗೆ ಒಬ್ಬಟ್ಟಿನ ಅಲಂಕಾರ ಮಾಡಿದ್ದು ಭಕ್ತರ ಗಮನ ಸೆಳೆಯಿತು. ಆಗಮಿಸಿದ ಭಕ್ತರಿಗೆ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು.
ನಂಬಿನಾಯಕನಹಳ್ಳಿ: ಕೊನೆಯ ಆಷಾಢ ಶುಕ್ರವಾರದ ಅಂಗವಾಗಿ ತಾಲೂಕಿನ ನಂಬಿನಾಯಕನಹಳ್ಳಿಯ ಶ್ರೀ ಪಟ್ಟಲದಮ್ಮ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ದೇಗುಲಕ್ಕೆ ಆಗಮಿಸಿದ ಭಕ್ತರು ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು.