ಮೈಸೂರು: ದಸರಾ ಆಹಾರ ಮೇಳವನ್ನು ಸೆಪ್ಟೆಂಬರ್ 26ರಿಂದ ಅಕ್ಟೋಬರ್ 3 ರವರೆಗೆ ನಡೆಯಲಿದ್ದು, ಸಾರ್ವಜನಿಕರಿಗೆ ಮತ್ತು ವ್ಯಾಪಾರಸ್ಥರಿಗೆ ಅನುಕೂಲವಾಗುವ ಉದ್ದೇಶದಿಂದ ನಗರದ ಎರಡು ಸ್ಥಳಗಳಲ್ಲಿ ಆಹಾರಮೇಳ ನಡೆಸಲು ಉದ್ದೇಶಿಸಲಾಗಿದೆ. ಭಾಗ ವಹಿಸುವವರಿಂದ ಅರ್ಜಿ ಆಹ್ವಾನಿಸಲಾಗಿದೆ.
ನಗರದ ಭಾರತ್ ಸ್ಕೌಟ್ಸ್-ಗೈಡ್ಸ್ ಮೈದಾನ ಮತ್ತು ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್ ಪಕ್ಕದ ಮುಡಾ ಮೈದಾನದಲ್ಲಿ ಆಯೋ ಜಿಸಲಾಗಿದೆ. ಎಲ್ಲ ವರ್ಗದ ಜನರ ಅಭಿರುಚಿ ಗಮನದಲ್ಲಿರಿಸಿಕೊಂಡು ವೈವಿಧ್ಯಮಯ ಆಹಾರ ಪದಾರ್ಥ ಉಣಬಡಿಸಲು ಉದ್ದೇಶಿ ಸಲಾಗಿದೆ. ದೇಶಿಯ ಮತ್ತು ಖಂಡಾಂತರ ಆಹಾರ ಪದ್ಧತಿಯ ಜತೆ ಪ್ರಾದೇಶಿಕ, ಹೊರ ರಾಜ್ಯಗಳ ವೈವಿಧ್ಯದ ಉಟೋಪಚಾರ ಅಳವಡಿಸಲಾಗುವುದು.
ರಾಜ್ಯದಲ್ಲಿರುವ ಸಿರಿಧಾನ್ಯ ಬೆಳೆಗಾರರು, ಸಹಜ ಮತ್ತು ನೈಸರ್ಗಿಕ ಕೃಷಿಕರು, ಸಾವಯವ ಕೃಷಿಕರು ಹಾಗೂ ಸಿರಿಧಾನ್ಯ ಬೆಳೆಗಾರರ ಸಂಘಗಳು ಮತ್ತು ಒಕ್ಕೂಟಗಳು ಆಹಾರ ಮೇಳಗಳಲ್ಲಿ ಭಾಗವಹಿಸುವಂತೆ ಆಹ್ವಾನಿಸಿದೆ. ಸಿರಿಧಾನ್ಯ ಅಡುಗೆ ತಯಾರಿಸಲು, ಸಹಜ ಮತ್ತು ಸಾವಯವ ಕೃಷಿಯಲ್ಲಿ ಬೆಳೆದ ಹಣ್ಣು ಮತ್ತು ತರಕಾರಿ ಮಾರಾಟಗಾರರುಗಳಿಗೆ ಎರಡು ಕಡೆಗೂ ಭಾಗವಹಿಸಲು ಅವಕಾಶ ಇದೆ
ಸೆ.12ರಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸಿದ್ಧಾಥನಗರದಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿಯ 2ನೇ ಮಹಡಿಯ ಕೊಠಡಿ ಸಂಖ್ಯೆ 33ರಲ್ಲಿ ಇರುವ ಅಧಿಕಾರಿಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗಾಗಿ ದೂ.9481216356, 9902248619, 8722104052, 974042897 ಸಂಪರ್ಕಿಸಬಹುದು.