filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.23694445, 0.494625);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 44; 
ಜಿಲ್ಲೆ

ಆಹಾರ ಸುರಕ್ಷತೆ, ನೋದಣಿಗೆ ಎಡಿಸಿ ತಾಕೀತು

ಚಿತ್ರದುರ್ಗ: ಶಾಲೆ, ಅಂಗನವಾಡಿ, ಮಹಿಳಾ ಸೇವಾ ಸಂಘಗಳು, ನ್ಯಾಯಬೆಲೆ ಅಂಗಡಿಗಳು, ಆಹಾರ ಪದಾರ್ಥಗಳ ವ್ಯವಹಾರ ನಡೆಸುವ ಔಷಧ ವ್ಯಾಪಾರಿಗಳು, ವಸತಿ ನಿಲಯಗಳು ಕಡ್ಡಾಯವಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ನೋಂದಣಿ ಮಾಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚಿಸಿದರು.
ಡಿಸಿ ಕಚೇರಿಯಲ್ಲಿ ಶುಕ್ರವಾರ ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಕುರಿತ ಜಿಲ್ಲಾಮಟ್ಟದ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು.
ಜೂನ್ ಅಂತ್ಯದೊಳಗೆ ಶೇ.100 ನೋಂದಣಿ ಆಗಬೇಕು. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಿಸಿದ ಎಲ್ಲ ಇಲಾಖೆಗಳು ಸೇರಿ ಆಹಾರ ಸುರಕ್ಷತೆ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಹೋಟೆಲ್, ಬೀದಿಬದಿ ಆಹಾರ ಪದಾರ್ಥಗಳ ಮಾರಾಟ ಸ್ಥಳಗಳಿಗೆ ನಿಯಮಿತ ಭೇಟಿ ನೀಡಿ, ಗುಣಮಟ್ಟ ಹಾಗೂ ಸ್ವಚ್ಛತೆ ಪರಿಶೀಲನೆಗೆ ತಾಕೀತು ಮಾಡಿದರು.
ಸಾರ್ವಜನಿಕರಿಗೆ ಗುಣಮಟ್ಟದ ಆಹಾರ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಆಹಾರ ಪದಾರ್ಥಗಳ ಸಂಗ್ರಹಣೆ, ಮಾರಾಟ, ತಯಾರಿಕೆ ಸಂದರ್ಭದಲ್ಲಿ ಕಾಯ್ದೆ ನಿಯಮಗಳನ್ನು ಅನುಸರಿಸಬೇಕಿದೆ ಎಂದರು.
ಆಹಾರ ಸುರಕ್ಷತೆ ಅಂಕಿತ ಅಧಿಕಾರಿ ಡಾ.ಸಿ.ಎಲ್.ಫಾಲಾಕ್ಷ ಮಾತನಾಡಿ, ಆಹಾರ ಸುರಕ್ಷತೆ ಹಿನ್ನೆಲೆಯಲ್ಲಿ ಇಲಾಖೆಯಿಂದ ಪರವಾನಗಿ ಮತ್ತು ನೋಂದಣಿ ಮಾಡುತ್ತೇವೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸಲಾಗುತ್ತದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 2225 ಪೈಕಿ 1371 ಶಾಲೆಗಳು ಹಾಗೂ 2331 ಪೈಕಿ 1367 ಅಂಗನವಾಡಿಗಳ ನೋಂದಣಿ ಆಗಿದೆ. 607 ನ್ಯಾಯಬೆಲೆ ಅಂಗಡಿಗಳ ಪೈಕಿ 328 ನೋಂದಣಿಗೆ ಬಾಕಿ ಇವೆ ಎಂದರು.
ಎಎಸ್‌ಪಿ ಎಸ್.ಜೆ.ಕುಮಾರಸ್ವಾಮಿ ,ಆಹಾರ ಇಲಾಖೆ ಜಂಟಿ ನಿರ್ದೇಶಕ ಕೆ.ಪಿ.ಮಧುಸೂದನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ಇತರರಿದ್ದರು.