ಬಳ್ಳಾರಿ : ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ - ಆಸ್ತಿ ತಂತ್ರಾಂಶದಲ್ಲಿ ಕಡ್ಡಾಯವಾಗಿ ನೋಂದಾಯಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಡಿಸಿ ಪ್ರಶಾಂತ ಕುಮಾರ ಮಿಶ್ರಾ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ನಗರಾಭಿವೃದ್ಧಿ ಇಲಾಖೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ- ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿಸಿದ್ದು, ಸೆ . 23 ರಿಂದ ಜಿಲ್ಲಾ ವ್ಯಾಪ್ತಿಯ ಎಲ್ಲ ಉಪ ನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಿ, ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ - ಆಸ್ತಿ ತಂತ್ರಾಂಶದಿಂದಲೇ ಪಡೆಯಬೇಕು ಎಂದು ತಿಳಿಸಿದ್ದಾರೆ.