ಬಾಗಲಕೋಟೆ: ನಗರದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ವಿಜಯಪುರ ಜಿಲ್ಲೆಯ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಭಾಗವಹಿಸಿ ಬೆಂಬಲ ವ್ಯಕ್ತಪಡಿಸಿದರು. ನಮಗೆ ನ್ಯಾಯ ಕೇಳುವ ಹಕ್ಕು ಇದೆ. ಕಾನೂನಾತ್ಮಕವಾಗಿ ಧ್ವನಿ ಎತ್ತಿದ್ದೇವೆ. ಯಾವುದೇ ಸರ್ಕಾರವಿರಲಿ ಕೃಷ್ಣಾ ಸಂತ್ರಸ್ತರ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುವ ಮುನ್ನ ಎಚ್ಚೆತ್ತುಕೊಂಡು ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.