ಹುಬ್ಬಳ್ಳಿ: ನಗರದ 6 ವರ್ಷದ ಬಾಲಕಿ ವಿಶ್ವಕೀರ್ತಿ ಕಾಂಬ್ಳೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಲ್ಲಿ ಸ್ಥಾನ ಪಡೆದಿದ್ದಾಳೆ.
ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ಸಾಮಾನ್ಯ ಜ್ಞಾನದ 100 ಪ್ರಶ್ನೆಗಳಿಗೆ 3 ನಿಮಿಷ 41 ಸೆಕೆಂಡ್ಗಳಲ್ಲಿ ಉತ್ತರಿಸುವ ಮೂಲಕ ಈ ಸಾಧನೆ ಮಾಡಿದ್ದಾಳೆ. ಈ ಸಾಧನೆಗೆ ಅತಿ ಕಡಿಮೆ ಸಮಯ ತೆಗೆದುಕೊಂಡಿದ್ದಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪ್ರಮಾಣಪತ್ರ ನೀಡಿ ಗೌರವಿಸಿದೆ.