ಗಂಧನಹಳ್ಳಿ: ಸಾಲಿಗ್ರಾಮ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಮಿರ್ಲೆ ವಿದ್ಯುತ್ ವಿತರಣಾ ಉಪ-ಕೇಂದ್ರದಿಂದ ಹೊಸದಾಗಿ ನಿರ್ಮಾಣವಾಗುತ್ತಿರುವ ವಿವಿ ಕೇಂದ್ರದ ಕಾಮಗಾರಿಗಾಗಿ ಕೆಲಸದ ನಿಮಿತ್ತ ಜು.16ರಿಂದ 18 ರವರಗೆ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
ಅಂಕನಹಳ್ಳಿ, ಗಂಧನಹಳ್ಳಿ, ನರಚನಹಳ್ಳಿ, ಮಿರ್ಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಸಾಲಿಗ್ರಾಮ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಮಧುಸೂದನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.