ವಿ.ಎಂ.ವಿಶ್ವನಾಥ್ 
ಜಿಲ್ಲೆ

ಇಂದು ಎಚ್.ಡಿ.ಕುಮಾರಸ್ವಾಮಿ ಜನ್ಮದಿನಾಚರಣೆ

ಮಳವಳ್ಳಿ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ಡಿ.16ರಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ವಿತರಣೆ ಹಾಗೂ ಪಂಚರತ್ನ ರಥಯಾತ್ರೆ ಸಂಬಂಧವಾಗಿ ಪಟ್ಟಣದ ಶಾಂತಿ ಸಮುದಾಯ ಭವನದಲ್ಲಿ ಕರೆದಿರುವ ಪೂರ್ವಭಾವಿ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸುವಂತೆ ಜೆಡಿಎಸ್ ತಾಲೂಕು ಅಧ್ಯಕ್ಷ ಹಾಗೂ ಕೆಎಂಎಫ್ ನಿರ್ದೇಶಕ ವಿ.ಎಂ.ವಿಶ್ವನಾಥ್ ತಿಳಿಸಿದರು.

ಜನಮೆಚ್ಚಿದ ನಾಯಕ ಎಚ್.ಡಿ.ಕುಮಾರಣ್ಣ ಅವರ ಜನ್ಮದಿನವನ್ನು ಜನಸೇವೆ ಮೂಲಕ ಶುಭ ಕೋರಬೇಕೆಂಬ ಉದ್ದೇಶದಿಂದ ರೋಗಿಗಳ ಆರೈಕೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಲ್ಲದೆ ಡಿ.20ರಿಂದ ಕುಮಾರಣ್ಣನ ಸಾರಥ್ಯದಲ್ಲಿ ಪಂಚರತ್ನಯಾತ್ರೆ ತಾಲೂಕಿನ ವ್ಯಾಪ್ತಿಯಲ್ಲಿ ಸಾಗುವುದರ ಜತೆಗೆ ದುಗ್ಗನಹಳ್ಳಿ ಗ್ರಾಮದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಪಂಚರತ್ನ ಯಾತ್ರೆಯ ಉದ್ದೇಶವನ್ನು ಜನರಿಗೆ ಮನದಟ್ಟು ಮಾಡುವ ಮೂಲಕ ಬಡವರ ಸೇವೆಗಾಗಿ ಕುಮಾರಣ್ಣನಿಗೆ ಅಧಿಕಾರದ ಚುಕ್ಕಾಣಿ ಕೊಡಿಸುವ ಹೊಣೆಗಾರಿಕೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಮೇಲಿದೆ ಎಂದರು.

ಆದ್ದರಿಂದ ಯಾತ್ರೆ ಯಶಸ್ವಿಗೊಳಿಸಲು ಶಾಸಕ ಡಾ.ಕೆ.ಅನ್ನದಾನಿ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಪೂರ್ವಭಾವಿ ಸಭೆ ಕರೆಯಲಾಗಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಕುಮಾರಣ್ಣನ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.