ಕೆ.ಆರ್.ಸಾಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರದ ವತಿಯಿಂದ ಕೆ.ಆರ್.ಸಾಗರದ ಬೃಂದಾವನ ಉದ್ಯಾನದಲ್ಲಿ ಜೂ.21ರಂದು ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಬೆಳಗ್ಗೆ 6.30 ರಿಂದ 8ರವರೆಗೆ ಕಾರ್ಯಕ್ರಮ ನಡೆಯಲಿದೆ. ದಕ್ಷಿಣ ಬೃಂದಾವನದ ಮಹಾರಾಜ ಪ್ರತಿಮೆ ಮುಂಭಾಗದಲ್ಲಿ ನೆಲಮಟ್ಟದಿಂದ ಸುಮಾರು 15 ಅಡಿ ಎತ್ತರದಲ್ಲಿ 12್ಡ30 ಅಡಿ ವೇದಿಕೆ ನಿರ್ಮಿಸಲಾಗಿದೆ. ವೇದಿಕೆ ಮೇಲೆ ಯೋಗ ಗುರುಗಳು, ಅತಿಥಿಗಳು ಯೋಗಾಭ್ಯಾಸ ಮಾಡಲಿದ್ದಾರೆ.
ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ ನೀಡಲಿದ್ದಾರೆ. ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮಾನಂದನಾಥ ಸ್ವಾಮೀಜಿ, ಚಂದ್ರವನ ಆಶ್ರಮದ ಡಾ.ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಭಾಗವಹಿಸುವರು. ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಅಧ್ಯಕ್ಷತೆ ವಹಿಸಲಿದ್ದು, ಜಿಲ್ಲೆಯ ವಿವಿಧ ಶಾಲೆಗಳಿಂದ 3000 ವಿದ್ಯಾರ್ಥಿಗಳು, ವಿವಿಧ ಇಲಾಖೆ ನೌಕರರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಜಿ.ಎಸ್.ಸೀತಾಲಕ್ಷ್ಮೀ ವಿಜಯವಾಣಿಗೆ ಮಾಹಿತಿ ನೀಡಿದರು.
ಎಎಸ್‌ಐ ಸುಬ್ಬಣ್ಣ ಮತ್ತು ಮಂಜುನಾಥ್ ನೇತೃತ್ವದಲ್ಲಿ ಮಂಗಳವಾರ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿದರು.