ಚಿತ್ರದುರ್ಗ:ಶಿಕ್ಷಣ ಸಚಿವ ಎಸ್.ಮಧುಬಂಗಾರಪ್ಪ ಅವರು ಡಿ.31ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಸಂಜೆ 4 ಗಂಟೆಗೆ ತಾಲೂಕಿನ ಸೀಬಾರ-ಗುತ್ತಿನಾಡು ವಿಶ್ವಮಾನವ ಸಾಂಸ್ಕೃತಿಕ ವಿದ್ಯಾಸಂಸ್ಥೆ ರಜತ ಮಹೋತ್ಸವ ಹಾಗೂ ವಿದ್ಯಾರ್ಥಿ ಸಂಘ ದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು. ಸಂಜೆ 5ಗಂಟೆಗೆ ಸಿರಿಗೆರೆ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯಲ್ಲಿ ಏರ್ಪಡಿ ಸಿರುವ ತರಳಬಾಳು ಕ್ರೀಡಾಮೇಳದ ಸಮಾರೋಪದಲ್ಲಿ ಭಾಗವಹಿಸಿದ ಬಳಿಕ ಬೆಂಗಳೂರಿಗೆ ತೆರಳುವರು.