ವಿಜಯವಾಣಿ ಸುದ್ದಿಜಾಲ ಕಲಬುರಗಿ
ರಾಜ್ಯದ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚವಿ ಶಿವಾನಂದ ಎಸ್. ಪಾಟೀಲರು ವಿಜಯಪುರದಿಂದ ರಸ್ತೆ ಮೂಲಕ ಜನವರಿ ೩ರಂದು ಬೆಳಗ್ಗೆ ೯.೩೦ಕ್ಕೆ ಕಲಬುರಗಿಗೆ ಆಗಮಿಸುವರು.
ಅಂದು ಬೆಳಗ್ಗೆ ೧೦.೩೦ಕ್ಕೆ ಸಮಿತಿಯ ಸದಸ್ಯರೊಂದಿಗೆ ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಭೇಟಿ ನೀಡಿ ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆಯ ಪರಿವೀಕ್ಷಣೆ ಮಾಡುವರು. ನಂತರ ಮಧ್ಯಾಹ್ನ ೧೨ಕ್ಕೆ ಕಲಬುರಗಿಯಿಂದ ರಸ್ತೆ ಮೂಲಕ ಯಾದಗಿರಿಗೆ ಪ್ರಯಾಣಿಸುವರು