ಚಿಕ್ಕಮಗಳೂರಿನ ಡಿಸಿ ಕಚೇರಿ ಸಭಾಂಗಣದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಯಿತು. ಮೀನಾ ನಾಗರಾಜ್, ನಾರಾಯಣ ರಡ್ಡಿ ಕನಕರಡ್ಡಿ, ಸುದರ್ಶನ್, ಎಚ್.ಸಿ.ಕಲ್ಮರುಡಪ್ಪ, ದೀಪಕ್ ದೊಡ್ಡಯ್ಯ ಮತ್ತಿತರರಿದ್ದರು. 
ಜಿಲ್ಲೆ

ಇನ್ನೊಂದು ವಾರದಲ್ಲಿ ಹೆದ್ದಾರಿ ಕಾಮಗಾರಿ ಆರಂಭ

ಚಿಕ್ಕಮಗಳೂರು: ಮೂಗ್ತಿಹಳ್ಳಿಯಿಂದ ಮೂಡಿಗೆರೆ ಹ್ಯಾಂಡ್ ಪೋಸ್ಟ್ವರೆಗಿನ ಹೆದ್ದಾರಿ ಕಾಮಗಾರಿಯನ್ನು ಇನ್ನೊಂದು ವಾರದ ಒಳಗಾಗಿ ಆರಂಭಿಸುವAತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಡಿಸಿ, ಎಡಿಸಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂಗ್ತಿಹಳ್ಳಿಯಿಂದ ಮೂಡಿಗೆರೆ ಹ್ಯಾಂಡ್ ಪೋಸ್ಟ್ವರೆಗೆ ೨೬.೬ ಕಿ.ಮೀ. ಹೆದ್ದಾರಿ ಅಭಿವೃದ್ಧಿ ಮಾಡಲಾಗುತ್ತದೆ. ಇದಕ್ಕಾಗಿ ೧೬೦ ರೈತರ ಜಮೀನನ್ನು ಭೂ ಸ್ವಾಧೀನ ಮಾಡಿಕೊಳ್ಳಲಾಗುತ್ತದೆ. ರೈತರಿಗೆ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಎಲ್ಲ ರೈತರಿಗೆ ನೋಟೀಸ್ ನೀಡುತ್ತೇವೆ ಎಂದರು.

ಮೊದಲ ಹಂತದ ಕಾಮಗಾರಿ ಶೀಘ್ರವೇ ಆರಂಭಗೊಳ್ಳಲಿದೆ. ಎರಡನೇ ಹಂತದ ಕಾಮಗಾರಿಗೆ ಅನುಮೋದನೆ ಸಿಕ್ಕಾಕ್ಷಣ ಆ ಕಾಮಗಾರಿಯೂ ಆರಂಭಗೊಳ್ಳಲಿದೆ. ಮಳೆ ಕಾರಣಕ್ಕೆ ಕಾಮಗಾರಿ ಆರಂಭ ವಿಳಂಬವಾಗಿದೆ. ಈಗಾಗಲೇ ಮಳೆ ಕಡಿಮೆಯಾಗಲಾರಂಭಿಸಿದೆ. ಹೀಗಾಗಿ ತುರ್ತಾಗಿ ಕಾಮಗಾರಿ ಆರಂಭಿಸುವAತೆ ಅಧಿಕಾರಿಗಳಿಗೆ ಸೂಚನೆ ನೀಡಿz್ದೆÃನೆ ಎಂದು ತಿಳಿಸಿದರು.

ಶೃಂಗೇರಿ ಹೆದ್ದಾರಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಶೃಂಗೇರಿ ಪಟ್ಟಣದೊಳಗೆ ಹಾದುಹೋಗಿರುವ ರಸ್ತೆ ಅಭಿವೃದ್ಧಿ ಮಾಡುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಅಲ್ಲದೆ ಈ ಹೆದ್ದಾರಿಯಲ್ಲಿ ಅಲ್ಲಲ್ಲಿ ತಡೆಗೋಡೆ ನಿರ್ಮಾಣ ಮಾಡುವ ಅಗತ್ಯವಿದ್ದು, ಈ ಬಗ್ಗೆಯೂ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.

ಬೇಲೂರು-ಚಿಕ್ಕಮಗಳೂರು ರಸ್ತೆ ಅಭಿವೃದ್ಧಿಗೂ ಕ್ರಮ ಕೈಗೊಳ್ಳಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆ ಆರಂಭಗೊAಡಿದೆ. ಅಲ್ಲದೆ ಅರಣ್ಯ ಇಲಾಖೆಯಿಂದ ಮರಕಡಿತಲೆಗೆ ಎನ್‌ಓಸಿ ಕೇಳಲಾಗಿದೆ. ಇದಲ್ಲದೆ ಬೇಲೂರು-ಮೂಡಿಗೆರೆ ಹ್ಯಾಂಡ್ ಪೋಸ್ಟ್ ವರೆಗಿನ ೩೧ ಕಿಮೀ ರಸ್ತೆ ಅಭಿವೃದ್ಧಿ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದಲ್ಲದೆ ಚಿಕ್ಕಮಗಳೂರು ಬೈಪಾಸ್ ರಸ್ತೆ ಅಭಿವೃದ್ಧಿ, ಚಿಕ್ಕಮಗಳೂರು -ಕಡೂರು ರಸ್ತೆ ಹಾಗೂ ತರೀಕೆರೆ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆಯೂ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಕೆಲ ದಿನಗಳಲ್ಲೇ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಆರ್‌ಒ ಶರ್ಮಾ ಅವರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿನ ಹೆದ್ದಾರಿಗಳ ಬಗ್ಗೆ ಚರ್ಚೆ ನಡೆಸಿ ಸೂಕ್ತ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡುವುದಾಗಿ ತಿಳಿಸಿದರು.

ಸಭೆಯಲ್ಲಿ ಡಿಸಿ ಮೀನಾ ನಾಗರಾಜ್, ಎಡಿಸಿ ನಾರಾಯಣ ರಡ್ಡಿ ಕನಕರಡ್ಡಿ, ಉಪವಿಭಾಗಾಧಿಕಾರಿ ಸುದರ್ಶನ್, ತಹಸೀಲ್ದಾರ್ ರೇಷ್ಮಾ ಶೆಟ್ಟಿ, ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ, ಎಚ್.ಸಿ.ಕಲ್ಮರುಡಪ್ಪ ಮತ್ತಿತರರಿದ್ದರು.