ಹುಮನಾಬಾದ್ (ಬೀದರ್): ಕುಟುಂಬದ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತಾಲೂಕಿನ ಧುಮನಸೂರ್ ಗ್ರಾಮ ಹೊರವಲಯದ ಬಾವಿಯಲ್ಲಿ ನಡೆದಿದೆ. ಮೃತರನ್ನು ಆಟೋ ಚಾಲಕ ಅಂಕುಶ್ ಹುಚ್ಚೆನೋರ್ (28), ಮಕ್ಕಳಾದ ತನು (6) ಹಾಗೂ ಸಾಯಿರಾಜ್ (5) ಎಂದು ಗುರುತಿಸಲಾಗಿದೆ. ಬುಧವಾರ ತಡರಾತ್ರಿ ಮನೆಯಿಂದ ಇಬ್ಬರು ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಂದು ಬಾವಿಗೆ ಬಿದ್ದಿರುವ ಅನುಮಾನ ವ್ಯಕ್ತವಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸುದ್ದಿ ತಿಳಿದು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಶವಗಳನ್ನು ಬಾವಿಯಿಂದ ಮೇಲೆತ್ತಿದ್ದಾರೆ.