ಜಿಲ್ಲೆ

ಇಬ್ಬರು ಸರಗಳ್ಳರ ಬಂಧನ

ಮೈಸೂರು: ಜಯಲಕ್ಷ್ಮೀಪುರಂ ಠಾಣೆ ಪೊಲೀಸರು ಇಬ್ಬರು ಸರಗಳ್ಳರನ್ನು ಬಂಧಿಸಿದ್ದಾರೆ.


ಇತ್ತೀಚೆಗೆ ಜಯಲಕ್ಷ್ಮೀಪುರಂ ವ್ಯಾಪ್ತಿಯಲ್ಲಿ ನಡೆದಿದ್ದ ಸರಗಳ್ಳತನ ಪ್ರಕರಣ ಸಂಬಂಧ ತನಿಖೆ ಆರಂಭಿಸಿದ್ದ ಪೊಲೀಸರು, ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ವಿವಿಧೆಡೆ ಸರಗಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿ ತಲೆ ಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಮುಂದುವರಿದಿದೆ.


ಇಬ್ಬರು ಆರೋಪಿಗಳು ಮೈಸೂರು ನಗರ, ಗ್ರಾಮಾಂತರ ಪ್ರದೇಶ ಸೇರಿದಂತೆ ಚಾಮರಾಜನಗರ, ಮಂಡ್ಯ ಜಿಲ್ಲೆಗಳಲ್ಲಿ ಸರಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು, 14 ಲಕ್ಷ ರೂ. ಮೌಲ್ಯದ 8 ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.


ಪತ್ತೆ ಕಾರ್ಯದಿಂದ ಮೈಸೂರು ನಗರದ ಜಯಲಕ್ಷ್ಮೀಪುರಂ, ಕುವೆಂಪುನಗರ, ಆಲನಹಳ್ಳಿ, ಉದಯಗಿರಿ ಪೊಲೀಸ್ ಠಾಣೆ ಹಾಗೂ ನಂಜನಗೂಡು ಟೌನ್ ಠಾಣೆ, ಕೆ.ಆರ್.ನಗರ ಠಾಣೆ, ತಿ.ನರಸೀಪುರ ಠಾಣೆ, ಕೊಳ್ಳೇಗಾಲ ಪಟ್ಟಣ ಠಾಣೆಗಳಲ್ಲಿ ತಲಾ ಒಂದೊಂದು ಸರಗಳ್ಳತನ ಪ್ರಕರಣಗಳು ಪತ್ತೆಯಾಗಿವೆೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.