ಜಿಲ್ಲೆ

ಇಸ್ರೋ ವಿಜ್ಞಾನಿಗಳ ಸಾಧನೆಗೆ ಇಡೀ ವಿಶ್ವವೇ ಬೆರಗು-ಮಹಾಂತೇಶ ಕವಟಗಿಮಠ

ಬೆಳಗಾವಿ: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ವಿಕ್ರಮ್ ಲ್ಯಾಂಡರ್ ಬುಧವಾರ ಸಂಜೆ 6.04ಕ್ಕೆ ನಿಗದಿತ ಸಮಯದಲ್ಲಿ ಯಶಸ್ವಿಯಾಗಿ ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಮಾಡಿದ ಮೊದಲ ದೇಶ ಎಂಬ ಹೆಗ್ಗಳಿಕೆ ಪಾತ್ರವಾಗಿದೆ. ಈ ಮೂಲಕ ಇಸ್ರೋ ವಿಜ್ಞಾನಿಗಳ ಹಾಗೂ ಕೋಟ್ಯಂತರ ಭಾರತೀಯರ ಚಂದ್ರಯಾನ ಕನಸು ನನಸಾಗಿದೆ ಎಂದು ವಿಧಾನ ಪರಿಷತ್ತಿನ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದ್ದಾರೆ.
ವಿಕ್ರಮ್ ಲ್ಯಾಂಡರ್ ಚಂದ್ರನ ಅಂಗಳವನ್ನು ಸ್ಪರ್ಶಿಸುತ್ತಿದ್ದಂತೆ ಇಸ್ರೋ ವಿಜ್ಞಾನಿಗಳು ಚಪ್ಪಾಳೆ, ಹರ್ಷೋದ್ಗಾರದ ಮೂಲಕ ಸಂಭ್ರಮಿಸಿದರು. ಭಾರತೀಯ ಬಾಹ್ಯಾಕಾಶ ತಂತ್ರಜ್ಞಾನ ಸಂಸ್ಥೆ ಇಸ್ರೋ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಇಸ್ರೋ ಅಧ್ಯಕ್ಷರಾದ ಸೋಮನಾಥ್ ಚಂದಿರದಲ್ಲಿ ಈಗ ಭಾರತವಿದೆ ಎಂದು ಘೋಷಿಸಿದ್ದಾರೆ. ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಲ್ಲಿಂದಲೇ ಈ ಪ್ರಕ್ರಿಯೆಯನ್ನು ವರ್ಚುವಲ್ ಮೂಲಕ ವಿಕ್ಷಿಸಿ, ಮಾತನಾಡಿದ ಅವರು ಇದೊಂದು ಐತಿಹಾಸಿಕ ಕ್ಷಣ ಈಗ ಭಾರತ ಚಂದ್ರನ ಮೇಲೆ ತಲುಪಿ ಸೂಪರ್ ಪವರ್ ರಾಷ್ಟ್ರವಾಗಿ ಹೊರಹೊಮ್ಮಿದೆ. ಈ ಐತಿಹಾಸಿಕ ಸಾಧನೆ ಮೂಲಕ ಭಾರತ ತನ್ನ ಸಾಮರ್ಥ್ಯವನ್ನು ಜಗತ್ತಿಗೆ ತೋರಿಸಿಕೊಟ್ಟಿದೆ ಎಂದು ಬಣ್ಣಿಸಿದರು. ಈ ಮೂಲಕ ವಿಶ್ವವೇ ಹುಬ್ಬೇರುವಂತೆ ಮಾಡಿ, ಜಾಗತಿಕವಾಗಿ ಭಾರತವನ್ನು ಗುರುತಿಸುವಂತೆ ಇಸ್ರೋದ ಎಲ್ಲಾ ವಿಜ್ಞಾನಿಗಳ ಸಾಧನೆಗೆ ಇಡೀ ವಿಶ್ವವೇ ಬೆರಗಾಗಿದೆ ಎಂದು ಮಹಾಂತೇಶ ಕವಟಗಿಮಠ ಅವರು ಹೇಳಿದ್ದಾರೆ.