ಮಂಡ್ಮ : ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬರುವುದು ಖಚಿತ ಎಂದು ಕಾಂಗ್ರೆಸ್ ಅಭ್ಯರ್ಥಿ ಕದಲೂರು ಕೆ.ಎಂ.ಉದಯ್ ವಿಶ್ವಾಸ ವ್ಯಕ್ತಪಡಿಸಿದರು.
ಶಿವಪುರದ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಕಚೇರಿಯಲ್ಲಿ ಸೋಮವಾರ ಸೋನಿಯಾ ಗಾಂಧಿ ಬ್ರಿಗೇಡ್ ಕಾಂಗ್ರೆಸ್‌ನ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾದ ಜೆ.ಸುಮಾವತಿ ಅವರಿಗೆ ಆದೇಶ ಪತ್ರ ವಿತರಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಸರ್ವ ಜನಾಂಗಕ್ಕೂ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತಂದು ರಾಜ್ಯದ ಜನರು ನೆಮ್ಮದಿಯಾಗಿ ಜೀವನ ಮಾಡಲು ಅವಕಾಶ ಕಲ್ಪಿಸಲಿದೆ. ಹೀಗಾಗಿ ರಾಜ್ಯದ ಜನರು ಕಾಂಗ್ರೆಸ್‌ಗೆ ಬೆಂಬಲ ನೀಡಲಿದ್ದಾರೆ ಎಂದರು.
ಜಿಲ್ಲಾ ಕಾಂಗ್ರೆಸ್ ಎಸ್‌ಸಿ-ಎಸ್‌ಟಿ ಘಟಕದ ಉಪಾಧ್ಯಕ್ಷ ನಾಗಭೂಷಣ್, ತಾಲೂಕು ಬ್ಲಾಕ್ ಅಧ್ಯಕ್ಷ ದೊರೆಸ್ವಾಮಿ, ನಗರ ಅಧ್ಯಕ್ಷ ರಾಜೇಶ್, ತಾಲೂಕು ಉಪಾಧ್ಯಕ್ಷ ಪ್ರಸನ್ನ ಇದ್ದರು.