ಯಾದಗಿರಿ: ಈಡಿಗ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ರಾಷ್ಟ್ರೀಯ ಈಡಿಗರ ಮಹಾಮಂಡಳಿಯ ಜಿಲ್ಲಾ ಘಟಕದಿಂದ ಶುಕ್ರವಾರ ಒಂದು ದಿನದ ಸಾಂಕೇತಿಕ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಯಿತು.
ಈಡಿಗ ಸಮಾಜದ ಪ್ರಣವಾನಂದ ಸ್ವಾಮಿಗಳು ಮಾತನಾಡಿ, ಕಳೆದ ಹಲವು ದಶಕಗಳಿಂದ ನಮ್ಮ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಸರಕಾರ ಮೇಲೆ ಒತ್ತಡ ಹೇರುತ್ತಲೇ ಬರುತ್ತಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಹೀಗಾಗಿ ಹಂತ ಹಂತವಾಗಿ ಹೋರಾಟಕ್ಕೆ ಸಮುದಾಯ ಅಣಿಯಾಗುತ್ತಿದೆ. ಹಿಂದಿನ ಬಿಜೆಪಿ ಸರಕಾರ ಸಮಾಜದ ಕುಲ ಶಾಸ್ತ್ರೀಯ ಅಧ್ಯಯನಕ್ಕಾಗಿ ಘೋಷಣೆ ಮಾಡಿದ 25 ಲಕ್ಷ ರೂ.ಗಳನ್ನು ಸಕರ್ಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಕುಲಕಸುಬು ಕಳೆದುಕೊಂಡ ಸಮಾಜ ಮುಖ್ಯವಾಹಿನಿಗೆ ಬರಲು ಸಕರ್ಾರ ಪ್ರತಿ ಕುಟುಂಬಕ್ಕೆ 2 ಎಕರೆ ಜಮೀನು ಮಂಜೂರು ಮಾಡಬೇಕು. ರಾಜ್ಯದಲ್ಲಿನ ಈಡಿಗ, ಬಿಲ್ಲವ, ನಾಮದಾರಿ ದೀವರ ಉಪ ಪಂಗಡಗಳಿಗೆ ಯಾವುದಾದರೂ ಯೋಜನೆಯಲ್ಲಿ ಮನೆ ನಿಮರ್ಾಣಕ್ಕೆ 25 ಸಾವಿರ ರೂ.ಬಿಡುಗಡೆ ಮಾಡಬೇಕು.ಬೆಂಗಳೂರಿನ ವಿಧಾನಸೌಧದ ಮುಂದೆ ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿ ಸ್ಥಾಪನೆಗೆ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಶರಣ ಹೆಂಡದ ಮಾರಯ್ಯನ ಜಯಂತಿ ಸರಕಾರದಿಂದಲೇ ಆಚರಣೆಯಾಗಬೇಕು. ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ದಿ.ಎಸ್.ಬಂಗಾರಪ್ಪ ಹೆಸರು ನಾಮಕರಣ ಮಾಡಬೇಕು. ನೀರಾ ಮಾರಾಟಕ್ಕಾಗಿ ಸರಕಾರದಿಂದಲೇ ನಿಗಮ ಸ್ಥಾಪನೆ ಮಾಡಬೇಕು ಎಂದು ಹೇಳಿದರು.