ಎನ್.ಆರ್.ಪುರ: ಮಹಾಶಿವರಾತ್ರಿ ಪ್ರಯುಕ್ತ ವಿವಿಧ ಕಡೆ ಈಶ್ವರ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ, ಮಹಾ ಮಂಗಳಾರತಿ ನಡೆಯಿತು.
ಅಗ್ರಹಾರದ ಉಮಾಮಹೇಶ್ವರ ದೇವಸ್ಥಾನದಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆ ನಡೆಯಿತು. ಅಗ್ರಹಾರದ ಲಲಿತ ಭಜನಾ ಮಂಡಳಿಯಿಂದ ಶಿವಸಹಸ್ರನಾಮ, ಕಲ್ಯಾಣಿ ವೃಷ್ಠಿಸ್ತವ, ಶಿವಾನಂದ ಲಹರಿ, ಶಿವ ಸಹಸ್ರನಾಮ, ಬಿಲ್ವಾಷ್ಟಕ ಮತ್ತು ಭಜನೆ ನಡೆಯಿತು.ನಾಗಲಾಪುರ ಈಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಮೆಣಸೂರು ಬಸವ ಕೇಂದ್ರದ ಸಮೀಪದ ಭದ್ರಾ ಹಿನ್ನೀರಿನ ತಟದಲ್ಲಿರುವ ಮುಕ್ತಿಧಾಮದ ಈಶ್ವರ ದೇವಸ್ಥಾನದಲ್ಲೂ ವಿಶೇಷ ಪೂಜೆ ನಡೆಯಿತು. ಕುದುರೆಗುಂಡಿ ಅಶ್ವಗುಂಡೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ಶತ ರುದ್ರಾಭಿಷೇಕ, ಮಹಾಪೂಜೆ, ಸಂಜೆ ಕಲ್ಪೋಕ್ತ ಪೂಜೆ ನಡೆಯಿತು. ಗುರುವಾರ ರುದ್ರಹೋಮ, ಗಣ ಹೋಮ ಮತ್ತು ಏಕ ದಶವಾರ ರುದ್ರಾಭಿಷೇಕ, ಮಹಾಪೂಜೆ, ಅನ್ನ ಸಂತರ್ಪಣೆ ನಡೆಯಿತು. ಮುತ್ತಿನಕೊಪ್ಪದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆ ನಡೆಯಿತು. ಭದ್ರಾ ಹಿನ್ನೀರಿನ ತಟದಲ್ಲಿರುವ ಹೆಬ್ಬೆ ಭವಾನಿ ಶಂಕರ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು. ಯಡಗೆರೆ ರಾಮನಾಥೇಶ್ವರ ದೇವಸ್ಥಾನ, ಹಂತುವಾನಿಯ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ, ಮಳಲಿ ಈಶ್ವರ ದೇವಸ್ಥಾನ, ಸೌತಿಕೆರೆಯ ಈಶ್ವರ ದೇವಸ್ಥಾನದಲ್ಲೂ ವಿಶೇಷ ಪೂಜೆ ನಡೆಯಿತು.