ವಿಜಯವಾಣಿ ಸುದ್ದಿಜಾಲ ಭಟ್ಕಳ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವ ಸಂಬಂಧ ವರದಿ ತರಿಸಿಕೊಂಡು, ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಭಟ್ಕಳದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಬುಧವಾರ ಮಾತನಾಡಿದ ಅವರು, ಆರೋಗ್ಯ ಕ್ಷೇತ್ರಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಇನ್ನು ಎಂಟ್ಹತ್ತು ದಿನದಲ್ಲಿ ಜಿಲ್ಲೆಗೆ ಆಗಮಿಸಿ, ಇಲ್ಲಿ ಮೆಡಿಕಲ್ ಕಾಲೇಜ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಸಂಬಂಧ ಘೋಷಿಸಲಾಗುವುದು. ಅಷ್ಟರೊಳಗೆ ಈ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು.
ಸಚಿವರಾದ ಆರ್. ಅಶೋಕ,ಕೋಟ ಶ್ರೀನಿವಾಸ ಪೂಜಾರಿ, ಶಿವರಾಮ ಹೆಬ್ಬಾರ, ಶಾಸಕರಾದ ಸುನೀಲ ನಾಯ್ಕ, ರೂಪಾಲಿ ನಾಯ್ಕ, ಎಂಎಲ್ ಸಿ ಗಣಪತಿ ಉಳ್ವೇಕರ್, ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷ ಗೋವಿಂದ ನಾಯ್ಕ ಇದ್ದರು.