ಚಿತ್ರದುರ್ಗ: ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಶುಕ್ರವಾರ ಸಂಜೆ ನಗರದಲ್ಲಿ ಮೋಂಬತ್ತಿ ಮೆರವಣಿಗೆ ನಡೆಸುವ ಮೂಲಕ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಗರದ ಶ್ರೀ ನೀಲಕಂಠೇಶ್ವರ ದೇವಾಲಯದಿಂದ ಗಾಂಧಿ ವೃತ್ತದವರೆಗೆ ನಡೆಸಿದ ಮೆರವಣಿಗೆಯಲ್ಲಿ ಉಗ್ರರು ಹಾಗೂ ಭಯೋತ್ಪಾದನೆ ವಿರುದ್ಧದ ಭಿತ್ತಿಪತ್ರಗಳನ್ನು ಹಿಡಿದಿದ್ದ ಪಕ್ಷದ ಪ್ರ ಮುಖರು, ಕಾರ್ಯಕರ್ತರು ದುರ್ಘಟನೆಯಲ್ಲಿ ಮಡಿದವರಿಗೆ ಸಂತಾಪ ಸೂಚಿಸಿದರು.
ಶಾಸಕ ಕೆ.ಸಿ. ವೀರೇಂದ್ರಪಪ್ಪಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಘು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಕಾರ್ಯಾಧ್ಯಕ್ಷ ಹಾಲಸ್ವಾಮಿ, ಜಿಲ್ಲಾ ಗ್ಯಾರಂಟಿಗಳ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ತಾಲೂಕು ಅಧ್ಯಕ್ಷ ಪ್ರಕಾಶ್, ಜಿಪಂ ಮಾಜಿ ಸದಸ್ಯ ಶಿವಮೂರ್ತಿ, ಸಂಪತ್‌ಕುಮಾರ್, ಡಿ.ಟಿ. ವೆಂಕಟೇಶ್, ಡಿ.ಎನ್. ಮೈಲಾರಪ್ಪ, ಗುರುರಾಜಶ್ರೇಷ್ಠಿ, ಸೈಯದ್ ಖುದ್ದೂಸ್, ಲಕ್ಷ್ಮೀಕಾಂತ್, ಎಸ್.ಎನ್. ರವಿಕುಮಾರ್, ಎನ್. ಡಿ. ಕುಮಾರ್, ಮುದಸೀರ್, ಕುಮಾರಗೌಡ, ಮಧುಗೌಡ, ವೆಂಕಟೇಶ್, ನಜ್ಮತಾಜ್, ಜಾಹ್ನವಿ ನಾಗರಾಜ್, ಶಬ್ಬೀರ್, ಸುದರ್ಶನ, ಎ. ಸಾಧಿಕ್‌ವುಲ್ಲಾ, ಶಶಿಕಿರಣ, ಅಂಜಿನಪ್ಪ ಮತ್ತಿತರರು ಇದ್ದರು.
ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಪ್ರತಿಭಟನೆ