ಹಾಸನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ನಗರದ ಚನ್ನಪಟ್ಟಣ ಶ್ರೀ ರಾಮ ಮಂದಿರದಲ್ಲಿ ಉಚಿತ ಕಣ್ಣಿನ ತಪಾಸಣೆ ಹಾಗೂ ಬಿ ಪಿ ಶುಗರ್ ತಪಾಸಣ ಶಿಬಿರವನ್ನು ಆಯೋಜಿಸಲಾಗಿತ್ತು.
ಮಣಿ ಸೂಪರ್ ಸ್ಪೆಷಲಿಟಿ ಆಸ್ಪತ್ರೆ ಹಾಗೂ ರಾಕೇಶ್ ನೇತ್ರಾಲಯ ಇವರ ಜಂಟಿ ಆಶ್ರಯದಲ್ಲಿ ನಡೆದ ಆರೋಗ್ಯ ತಪಾಸಣಾ ಶಿಬಿರದಲ್ಲಿ ನೂರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿ ತಪಾಸಣೆಯಲ್ಲಿ ಪಾಲ್ಗೊಂಡರು
ಈ ಸಂದರ್ಭದಲ್ಲಿ ಬಡಾವಣೆ ಮುಖಂಡ ಪರಮೇಶ್ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯು ಮಹಿಳೆಯರ ಅಭಿವೃದ್ಧಿಗೆ ಉತ್ತಮ ಯೋಜನೆಗಳನ್ನು ಹಮ್ಮಿಕೊಂಡಿದ್ದು ಹಾಗೂ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಹಲವಾರು ಕಾರ್ಯಕ್ರಮ ಆಯೋಜನೆ ಮಾಡಿದ್ದು ಸದಸ್ಯರು ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ರಾಕೇಶ್ ನೇತ್ರಾಲಯದ ಲೋಹಿತ್, ಮಣಿ ಸೂಪರ್ ಸ್ಪೆಷಲಿಟಿ ಆಸ್ಪತ್ರೆಯ ಡಾ. ಸಾನಿಯಾ, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯ ಗಿರೀಶ್, ಜ್ಞಾನ ವಿಕಾಸ ಸಮನ್ವಯ ಅಧಿಕಾರಿ ಬಬಿತ, ವಲಯದ ಮೇಲ್ವಿಚಾರಕ ತುಳಸಿ, ಸೇವಾಪ್ರತಿನಿಧಿ ಮೀನಾಕ್ಷಿ ಉಪಸ್ಥಿತರಿದ್ದರು