ಜಿಲ್ಲೆ

ಉಚಿತ ರಕ್ತದಾನ ಶಿಬಿರ ಆಯೋಜನೆ

ಬಳ್ಳಾರಿ: ತಾಲೂಕಿನ ಚೆಳ್ಳಗುರ್ಕಿ ಗ್ರಾಮದ ಎರ‌್ರಿಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜೂ.12, 13 ರಂದು ಸ್ವಯಂ ಪ್ರೇರಿತ ಉಚಿತ ರಕ್ತದಾನ ಶಿಬಿರ 2 ದಿನಗಳ ಕಾಲ ಏರ್ಪಡಿಸಲಾಗಿದ್ದು, ಜಾತ್ರೆಗೆ ಆಗಮಿಸುವ 18 ವರ್ಷ ಮೇಲ್ಪಟ್ಟ ಆರೋಗ್ಯವಂತ ಪುರುಷ ಮತ್ತು ಮಹಿಳಾ ಭಕ್ತಾಧಿಗಳು ರಕ್ತದಾನ ಮಾಡಬೇಕು ಎಂದು ಡಿಎಚ್‌ಒ ಡಾ.ವೈ.ರಮೇಶ ಬಾಬು ಮನವಿ ಮಾಡಿದರು.
ತಾಲೂಕಿನ ಚೆಳ್ಳಗುರ್ಕಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿ ಅಗತ್ಯ ಸಿದ್ಧತೆಗಳ ಪರಿಶೀಲನೆ ನಡೆಸಿ ಮಾತನಾಡಿದರು. ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚೆಳ್ಳಗುರ್ಕಿ ಗ್ರಾಪಂ, ಜಿಲ್ಲಾ ರಕ್ತ ಸುರಕ್ಷತಾ ಟಾಸ್ಕ್ ಫೋರ್ಸ ಸಮಿತಿ, ಏಡ್ಸ್ ನಿಯಂತ್ರಣ ಘಟಕ ಮತ್ತು ಶ್ರೀಎರ‌್ರಿಸ್ವಾಮಿ ಜೀವ ಸಮಾಧಿ ಟ್ರಸ್ಟ್, ಸ್ವಾಮಿ ವಿವೇಕಾನಂದ ಬ್ಲಡ್ ಬ್ಯಾಂಕ್ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು, ಕನಿಷ್ಟ 400 ಯುನಿಟ್ ರಕ್ತ ಸಂಗ್ರಹಿಸುವ ಗುರಿ ಹೊಂದಿದೆ. ಈ ಮೂಲಕ ರಕ್ತದ ಕೊರತೆಯನ್ನು ನೀಗಿಸಲು ಪ್ರತಿಯೊಬ್ಬರೂ ಸಹಕಾರ ನೀಡಬೇಕು. ಜಾತ್ರೆಗೆ ಆಗಮಿಸುವ 18 ವರ್ಷ ಮೇಲ್ಪಟ್ಟ ಆರೋಗ್ಯವಂತ ಭಕ್ತಾಧಿಗಳು ರಕ್ತದಾನ ಮಾಡುವಂತೆ ವಿನಂತಿಸಿದರು.