ಕುಶಾಲನಗರ: ಆರೋಗ್ಯ ಕಾಪಾಡಿಕೊಳ್ಳುವ ಉದ್ದೇಶದಿಂದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಕೂಡುಮಂಗಳೂರು ಗ್ರಾಪಂ ಉಪಾಧ್ಯಕ್ಷ ಭಾಸ್ಕರ್ ನಾಯಕ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿಯಂತ್ರಣ ವಿಭಾಗದ ಸಹಯೋಗದಲ್ಲಿ ಕೂಡಿಗೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರ ಆಯೋಜಿಸಿದ್ದ ಕಣ್ಣಿನಉಚಿತ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಆಯೋಜಿಸುವ ಇಂತಹ ಉಚಿತ ಶಿಬಿರಗಳ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಕೂಡುಮಂಗಳೂರು ಗ್ರಾಮ ಪಂಚಾಯಿತಿ ಸದಸ್ಯೆ ಫಿಲೋಮಿನಾ ಮಾತನಾಡಿ, ಶಿಬಿರ ಬಡ ಜನರ ಪಾಲಿಗೆ ವರವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಜನರು ಪಾಲ್ಗೊಳ್ಳುವ ಮೂಲಕ ಶಿಬಿರವನ್ನು ಯಶಸ್ವಿಯಾಗಿಸಿದ್ದಾರೆ ಎಂದರು.
ಕೂಡಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ತೇಜಸ್ವಿನಿ ಮಾತನಾಡಿದರು. ಕೂಡುಮಂಗಳೂರು ಗ್ರಾಪಂ ಸದಸ್ಯ ಚಂದ್ರು ಮೂಡ್ಲಿಗೌಡ, ಕೂಡಿಗೆ ಆಸ್ಪತ್ರೆ ಸಿಬ್ಬಂದಿ ಮತ್ತು ಸಾರ್ವಜನಿಕರು ಹಾಜರಿದ್ದರು.