ಜಿಲ್ಲೆ

ಉಚಿತ ಹಾಕಿ ಬೇಸಿಗೆ ಶಿಬಿರ ಆರಂಭ

  • ಮಡಿಕೇರಿ: ನಾಪೋಕ್ಲು ಮೀಪದ ಮೂರ್ನಾಡು ವಿದ್ಯಾಸಂಸ್ಥೆಯ ಜನರಲ್ ಕೆ.ಎಸ್.ತಿಮ್ಮಯ್ಯ ಅಕಾಡೆಮಿ ಫಾರ್ ಸ್ಫೋರ್ಟ್ಸ್ ಆ್ಯಂಡ್ ಗೇಮ್ಸ್ ವತಿಯಿಂದ ಆಯೋಜಿಸಿರುವ 12ನೇ ವರ್ಷದ ಉಚಿತ ಹಾಕಿ ಬೇಸಿಗೆ ಶಿಬಿರವನ್ನು ಶನಿವಾರ ಏಕಲವ್ಯ ಪ್ರಶಸ್ತಿ ವಿಜೇತ ಕ್ರೀಡಾಪಟು ಪುದಿಯೊಕ್ಕಡ ಪ್ರಧಾನ್ ಸೋಮಣ್ಣ ಉದ್ಘಾಟಿಸಿದರು.

  • ಪ್ರತಿದಿನ ಬೆಳಗ್ಗೆ 7ರಿಂದ 9 ಗಂಟೆಯವರೆಗೆ ನಡೆಯುವ ಈ ಹಾಕಿ ತರಬೇತಿ ಶಿಬಿರ ಆಯೋಜಿಸಿದ್ದು, ಆಸಕ್ತ ಕ್ರೀಡಾಪಟುಗಳು ಭಾಗವಹಿಸಬಹುದು. ಕ್ರೀಡೆ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿ. ಕ್ರೀಡೆಯನ್ನು ಕೇವಲ ಮನೋರಂಜನೆಗಾಗಿ ಎಂದು ಪರಿಗಣಿಸದೆ ಪೂರ್ಣಕಾಲಿಕ ಉದ್ಯೋಗವಾಗಿಸಿಕೊಂಡರೆ ಜೀವನದಲ್ಲಿ ಮುಂದೆ ಬರಬಹುದು ಎಂದು ಸೋಮಣ್ಣ ಕಿವಿಮಾತು ಹೇಳಿದರು.

  • ಜನರಲ್ ಕೆ.ಎಸ್. ತಿಮ್ಮಯ್ಯ ಅಕಾಡೆಮಿ ಉಪಾಧ್ಯಕ್ಷ ಪುದಿಯೊಕ್ಕಡ ಸುಬ್ರಮಣಿ, ನಿರ್ದೇಶಕರಾದ ಪೆಮ್ಮಡಿಯಂಡ ವೇಣು ಅಪ್ಪಣ್ಣ, ಮೂಡೇರ ಕಾಳಯ್ಯ, ತರಬೇತುದಾರರು, ಶಿಕ್ಷಕರು ಹಾಗೂ ಕ್ರೀಡಾಭಿಮಾನಿಗಳು ಪಾಲ್ಗೊಂಡಿದ್ದರು.