ಜಿಲ್ಲೆ

ಉಡುಪಿ 77 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

ಉಡುಪಿ: ಜಿಲ್ಲೆಯಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಿದ್ದು, 77 ಕೇಂದ್ರಗಳಲ್ಲಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾದರು.
ಜಿಲ್ಲೆಯಲ್ಲಿ 77 ಪರೀಕ್ಷಾ ಕೇಂದ್ರಗಳಲ್ಲಿ 12,881 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಕೋರ್ ವಿಷಯದಲ್ಲಿ ಸೋಮವಾರ ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 8.30 ಕ್ಕೆ ಮಕ್ಕಳಿಗೆ ಪರೀಕ್ಷಾ ಕೇಂದ್ರಗಳನ್ನು ತಲುಪಲು ಅವಕಾಶ ನೀಡಲಾಗಿತ್ತು. ಆರೋಗ್ಯ ತಪಾಸಣೆಯ ನಂತರ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಗಳಿಗೆ ಕಳುಹಿಸಲಾಗಿದೆ‌. ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು.