ಜಿಲ್ಲೆ

ಉಡುಪಿ ಜಿಲ್ಲಾದ್ಯಂತ ಗುಡುಗು ಸಹಿತ ಗಾಳಿ-ಮಳೆ,ಮನೆಗಳಿಗೆ ಸಿಡಿಲು ಬಡಿದು ಹಾನಿ‌

udupireporter

ಉಡುಪಿ: ಜಿಲ್ಲೆಯಲ್ಲಿ ಸೋಮವಾರ ಭಾರಿ ಗುಡುಗು ಸಹಿತ ಮಳೆಯಾಗಿದ್ದು, ಹಲವೆಡೇ ಮನೆಗಳಿಗೆ ಸಿಡಿಲು ಬಡಿದು ಹಾನಿ ಸಂಭವಿಸಿದೆ.
ಬ್ರಹ್ಮಾವರ ತಾಲೂಕಿನ ನೈಲಾಡಿ ಬೂದಾಡಿ ಮನೆಯೊಂದರ ಮೇಲೆ ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಸಿಡಿಲು ಅಪ್ಪಳಿಸಿದ ಪರಿಣಾಮ ಮೇಲ್ಛಾವಣಿ, ವಿದ್ಯುತ್ ತಂತಿ ಸುಟ್ಟು, ಮಹಿಳೆಯೊಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪರಾಗಿದ್ದಾರೆ.

ಬೂದಾಡಿ ಮನೆಯ ನಾಗರತ್ನ ಭುಜಂಗ ಶೆಟ್ಟಿ ಅವರ ಮನೆಯಲ್ಲಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ.‌ನಷ್ಟ ಉಂಟಾಗಿದೆ‌. ಮನೆಯಲ್ಲಿದ್ದ ಮಹಿಳೆಯೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮನೆಯ ಇಡೀ ವೈಯರಿಂಗ್ ಸುಟ್ಟು ಹೋಗಿದೆ. ಮಹಡಿಯ ಮೇಲ್ಛಾವಣಿ ಒಡೆದು ಹೋಗಿದೆ. ಉಡುಪಿ ನಗರ, ಹೆಬ್ರಿ, ಕಾರ್ಕಳ, ಬ್ರಹ್ಮಾವರ, ಕುಂದಾಪುರ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಜಿಲ್ಲೆಯಲ್ಲಿ ರಾತ್ರಿಯಿಡೀ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು.‌