ಯಾದಗಿರಿ: ಪೌಷ್ಟಿಕ ಆಹಾರ ಸೇವನೆಯಿಂದ ಉತ್ತಮ ಆರೋಗ್ಯವನ್ನು ಪಡೆಯಲು ಸಾಧ್ಯವಾಗುತ್ತದೆ. ತಾಯಿ ಮತ್ತು ಮಗುವಿನ ಆರೋಗ್ಯ ಸದೃಢಗೊಳ್ಳುತ್ತದೆ ಎಂದು ನ್ಯಾಯಾಧೀಶ ಸಿದ್ರಾಮ ಟಿಪಿ ತಿಳಿಸಿದರು.
ಶಹಾಪುರದಲ್ಲಿ ರಾಷ್ಟ್ರೀಯ ಪೋಷಣ ಅಭಿಯಾಣದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಕಾನೂನು -ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಭಾಗದ ಜನತೆ ಆರೋಗ್ಯದ ಬಗ್ಗೆ ಹೆಚ್ಚಿನ ತಿಳಿವಳಿಕೆ ಮೂಡಿಸಿಕೊಳ್ಳುವ ಅಗತ್ಯವಿದೆ ಎಂದರು.
ಪ್ರಧಾನ ಸಿವಿಲ್ ನ್ಯಾಯಾಧೀಶೆ ಶೋಭಾ, ತಾಲೂಕು ಆರೋಗ್ಯಾಕಾರಿ ಡಾ.ರಮೇಶ ಗುತ್ತೇದಾರ್, ಮೀನಾಕ್ಷಿ, ಬಸವರಾಜ ಇದ್ದರು.