ಜಿಲ್ಲೆ

ಉತ್ತಮ ಪ್ರಜೆಯಾಗಿ ಸಮಾಜ ಮುಖಿಯಾಗಿ ಕೆಲಸ ಮಾಡಲು ಮುಂದಾಗಬೇಕು :ಕೆ.ಎಸ್.ಲಿಂಗೇಶ್

ಬೇಲೂರು: ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಂಡು ಬಡ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆದು ದೇಶಕ್ಕೆ, ಹುಟ್ಟಿದ ಊರಿಗೆ ತನ್ನದೇ ಆದ ಕೊಡುಗೆ ನೀಡುವ ಮೂಲಕ ಉತ್ತಮ ಪ್ರಜೆಯಾಗಿ ಸಮಾಜ ಮುಖಿಯಾಗಿ ಕೆಲಸ ಮಾಡಲು ಮುಂದಾಗಬೇಕು ಎಂದು ಶಾಸಕ ಕೆ.ಎಸ್.ಲಿಂಗೇಶ್ ಹೇಳಿದರು.


ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ತಾಲೂಕು ಪಂಚಾಯಿತಿ ಕಚೇರಿ ಆವರಣ ಮಂಗಳವಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಶಾಲಾ ಕಿಟ್ ವಿತರಿಸಿ ಮಾತನಾಡಿದ ಅವರು, ಕರ್ನಾಟಕದ ಪ್ರತಿಯೊಬ್ಬ ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯುವಂತಾಗಬೇಕೆಂದು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಏಕ ರೂಪ ಶಿಕ್ಷಣ ಜಾರಿಗೆ ತಂದಿದ್ದು, ಅದರಲ್ಲಿ ಹೆಚ್ಚು ಒತ್ತು ನೀಡುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸರ್ಕಾರದಿಂದ 5 ಸಾವಿರ ರೂ, ಮೌಲ್ಯದ ಶಾಲಾ ಕಿಟ್‌ಗಳನ್ನು ವಿತರಿಸಲಾಗುತ್ತಿದೆ. ಇದನ್ನು ಪೋಷಕರು ಮಕ್ಕಳ ವಿದ್ಯಾಭ್ಯಾಸಕ್ಕಿ ಸದೂಪಯೋಗ ಪಡಿಸಿಕೊಳ್ಳಬೇಕು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು 1996 ರಲ್ಲಿ ರಾಜ್ಯದಲ್ಲಿ ಕಾರ್ಮಿಕ ಕಾಯ್ದೆ ಜಾರಿಗೆ ತಂದರು. ಅದನ್ನು ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾದ ಸಂದರ್ಭ ಅನುಷ್ಠಾನಕ್ಕೆ ತಂದು ಬಡ ಮಕ್ಕಳ ಹಾಗೂ ಪೋಷಕರಿಗೆ ಅನುಕೂಲ ಕಲ್ಪಿಸಿದರು

ಅಲ್ಲದೆ ಅವರು ಪಬ್ಲಿಕ್ ಶಾಲೆಯನ್ನು ತೆರೆದು ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನಿಡಿದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಬೆಂಬಲಿಸಿ ಸಂಪೂರ್ಣ ಅಧಿಕಾರವನ್ನು ನೀಡಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಲು ಆಶೀರ್ವದಿಸಿದರೆ ರಾಜ್ಯದ ಎಲ್ಲ ಹೋಬಳಿಗಳಲ್ಲೂ ಪಬ್ಲಿಕ್ ಶಾಲೆಗಳನ್ನು ತೆರೆಯಲಿದ್ದೇವೆ, ಮತ್ತು ಪೋಷಕರು ತಮ್ಮ ಜೀವನವನ್ನು ಕೇವಲ ದುಡಿಮೆಗೆ ಮೀಸಲಿಟ್ಟರೆ ಸಾಲದು ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಭಾರತದ ಭೂಪಟದಲ್ಲಿ ರಾರಾಜಿಸುವಂತೆ ಮಾಡುವುದಕ್ಕೆ ಮುಂದಾಗಬೇಕು ಎಂದರು.

ಅಕ್ಷರ ದಾಸೀಕ ಸಹಾಯಕ ನಿರ್ದೇಶಕ ನಿರ್ದೇಶಕ ಜಗದೀಶ್ ನಾಯಕ್, ಕಾರ್ಮಿಕ ಇಲಾಖೆ ನೀರಿಕ್ಷಕ ಯೋಗೇಶ್, ಶಾಸಕರ ಆಪ್ತ ಕಾರ್ಯದರ್ಶಿ ತಾರಾನಾಥ್ ನಾಯಕ್, ದೈಹಿಕ ಶಿಕ್ಷಣ ಪರಿವೀಕ್ಷಕ ಪಾಲಾಕ್ಷಮೂರ್ತಿ, ತಾಪಂ ಸಿಬ್ಬಂದಿ ನಂದಕುಮಾರ್, ಬೋಜೇಗೌಡ ಹಾಗೂ ಕಾರ್ಮಿಕರು ಮತ್ತು ಮಕ್ಕಳಿದ್ದರು.